LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಖಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯ ಶಾಸಕ ರಾಜು ಕಾಗೆ ಚಾಲನೆ ನೀಡಿದರು 

ಕಾಗವಾಡ: ಮತಕ್ಷೇತ್ರದಲ್ಲಿ ಮುಂಗಾರು ಮಳೆ ಕೊರತೆಯಾಗಿದ್ದರೂ ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ತುಂಬಿ ಹರಿಯುತ್ತಿದು, ರೈತರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಐನಾಪುರ ಮತ್ತು ಖಿಳೇಗಾವ, ಬಸವೇಶ್ವರ ಯಾತ ನೀರಾವರಿ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ರೈತರು ಇದರ ಲಾಭ ಪಡೆದುಕೊಳ್ಳಬೇಕೆಂದು ಶಾಸಕ ರಾಜು ಕಾಗೆ ಹೇಳಿದ್ದಾರೆ 
 ಅವರು ಶುಕ್ರವಾರ ದಿ.10 ರಂದು ತಾಲೂಕಿನ ಐನಾಪುರ ಪಟ್ಟಣದಲ್ಲಿ ಐನಾಪುರ ಯಾತ್ ನೀರಾವರಿ ಬಸವೇಶ್ವರ ಯಾತ ನೀರಾವರಿ ಕಾಲುವೆಗಳಿಗೆ ನೀರು ಹರಿಸಿ ಮಾತನಾಡುತ್ತಿದ್ದರು.
 ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕವಲಗುಡ್ಡ ಹನುಮಾಪುರ ಪರಮಪೂಜ್ಯ ಅಮರೇಶ್ವರ ಮಹಾರಾಜರು ವಹಿಸಿ, ಮಾತನಾಡುತ್ತಾ ಶಾಸಕ ರಾಜು ಕಾಗೆ ಅವರು ತಮ್ಮ ಆರೋಗ್ಯದ ಸಮಸ್ಯೆಯನ್ನು ಲೆಕ್ಕಿಸದೆ ಕ್ಷೇತ್ರದ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾಲುವೆಗಳಿಗೆ ನೀರು ಹರಿಸಲು ಆಗಮಿಸಿರುವುದು ಕ್ಷೇತ್ರದ ಮೇಲಿರುವ ಅವರ ಕಾಳಜಿಯನ್ನು ಎತ್ತಿ ತೋರಿಸುತ್ತದೆ ಎಂದರು.  ಮುಖಂಡರಾದ ವಿನಾಯಕ ಬಾಗಡಿ, ಸೇರಿದಂತೆ ಅನೇಕರು ಮಾತನಾಡಿದರು. 
ಈ ವೇಳೆ ಮುಖಂಡರಾದ ಸಂಜಯ ತಳವಳಕರ, ಶಂಕರ ವಾಘಮೋಡೆ, ವಿನಾಯಕ ಬಾಗಡಿ, ಶಿವಾನಂದ ಗೋಲಬಾವಿ, ರವಿ ಗಾಣಿಗೇರ, ಅರುಣ ಗಾಣಿಗೇರ, ಸಂಜಯ ಕುಚನೂರೆ, ವಸಂತ ಖೋತ, ರವೀಂದ್ರ ಪೂಜಾರಿ, ವಿನಾಯಕ ಕಾಂಬಳೆ, ನೀರಾವರಿ ಇಲಾಖೆ ಅಧಿಕಾರಿಗಳಾದ ಪ್ರವೀಣ ಹುಣಸಿಕಟ್ಟಿ, ಪ್ರಶಾಂತ ಪೋತದಾರ, ಬಸವರಾಜ ಗಲಗಲಿ, ಮುತ್ತು ಕೊಕಟನೂರ, ವಿಠ್ಠಲ ಕೊಕಟನೂರ, ಗಾಯತ್ರಿ ಕನ್ಸ್ಟ್ರಕ್ಷನ್ ನ ಕೆ.ನಾಗೇಶ, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್