LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಿಚ್ಚ ಸುದೀಪ್ ಬಿಡುಗಡೆ ಮಾಡಿದ   ಗೌರಿ ಚಿತ್ರದ ಟ್ರೇಲರ್







     ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ  ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ 'ಗೌರಿ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.  ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

     ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ ಶ್ಯಾಮ್ ಮುಂತಾದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು.


     ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್ ಅವರು "ಇಂದ್ರಜಿತ್‍ ಮತ್ತು ನಾನು ಹಳೆಯ ಸ್ನೇಹಿತರು. ಇಬ್ಬರೂ ಜೊತೆಗೆ ಬ್ಯಾಡ್ಮಿಂಟನ್‍ ಆಡುತ್ತಿದ್ದೆವು. ಲಂಕೇಶ್‍ ಅವರ ಮಗ ಅಂತ ಗೊತ್ತಿರಲಿಲ್ಲ. ಆದರೆ, ಬಹಳ ಚೆನ್ನಾಗಿ ಶಟಲ್‍ ಆಡೋರು. ಸಮರ್ಜಿತ್‍ನ ಯಶಸ್ಸು ಅವನೊಬ್ಬನ ಯಶಸ್ಸು ಆಗಿರುವುದಿಲ್ಲ. ಅದರಲ್ಲಿ ಇಂದ್ರಜಿತ್‍ ಅವರ ಯಶಸ್ಸೂ ಇದೆ. ಇನ್ನು   ಸಾನ್ಯ ಅವರು ಉತ್ತಮ ನಟಿ ಅಷ್ಟೇ ಅಲ್ಲ ಒಳ್ಳೆಯ ಬರಹಗಾರ್ತಿ ಕೂಡ. ಅದು ನನಗೆ ಬಿಗ್ ಬಾಸ್ ಸಮಯದಲ್ಲಿ ತಿಳಿಯಿತು.  ಸಿನಿಮಾ ಬಿಡುಗಡೆಯಾದ ಮೇಲೆ ಜೀವನ ಇದೇ ತರಹ ಇರುವುದಿಲ್ಲ. ಅದು ನಿಮ್ಮನ್ನು ಎಲ್ಲಿಗೆ ಕೊಂಡೊಯ್ಯುತ್ತದೋ ಗೊತ್ತಿಲ್ಲ. ಅದಕ್ಕೆ ಸಿದ್ದರಾಗಿರಿ" ಎಂದರು.


     "ಸುದೀಪ್ ಹಾಗೂ ನನ್ನ ಗೆಳೆತನ ಎರಡು ದಶಕಗಳಿಗೂ ಮೀರಿದ್ದು. ಅವರ ಜೊತೆ ಶಟಲ್ ಆಡಿದ ದಿನಗಳು ಈಗಲೂ ಕಣ್ಣಮುಂದೆ ಇದೆ. ಹಿಂದೆ ನನ್ನ ನಿರ್ದೇಶನದ ಚಿತ್ರವೊಂದರಲ್ಲಿ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದರು. ಆದರೆ ಅವರು ನನ್ನಿಂದ ಯಾವ ಸಂಭಾವನೆಯನ್ನು ಪಡೆದಿರಲಿಲ್ಲ. ಆಮೇಲೆ ನಾನು ಅವರಿಗೆ ಏನು ಕೊಡುವುದು? ಅವರ ಬಳಿ ಎಲ್ಲಾ ಇದೆ ಎಂದು ಕೊಂಡು, ಅವರ ಮಗಳಿಗೆ ವಿಶೇಷ ಉಡುಗೊರೆ ತೆಗೆದುಕೊಂಡು ಅವರ ಮನೆಗೆ ಹೋದೆ. ಆದರೆ ಸುದೀಪ್ ಅವರು ಅದನ್ನು ನನಗೆ ಕೊಡಲು ಬಿಡಲಿಲ್ಲ. ಈ ರೀತಿ ನನಗೆ ಮೊದಲಿನಿಂದಲೂ ಅವರು ನನಗೆ ಸಪೋರ್ಟ್ ಮಾಡುತ್ತಾ ಬರುತ್ತಿದ್ದಾರೆ. ಇಂದು ನನ್ನ ಮಗನ ಮೊದಲ ಚಿತ್ರದ  ಟ್ರೇಲರ್ ಬಿಡುಗಡೆ ಮಾಡಿ ಕೊಟ್ಟಿದ್ದಾರೆ ಅವರಿಗೆ ಧನ್ಯವಾದ. ಇಂದು ಕೂಡ ನನ್ನ ಬಳಿ ಅವರು ಯಾವ ಉಡುಗೊರೆ ತೆಗೆದುಕೊಳ್ಳುವುದಿಲ್ಲ. ಹಾಗಾಗಿ ಅವರಿಗಾಗಿ ಇಂಗ್ಲೆಂಡ್ ನಿಂದ ವಿಶೇಷ ಬ್ಯಾಟ್ ತರಿಸಿದ್ದೇನೆ" ಎಂದು  ಇಂದ್ರಜಿತ್ ಲಂಕೇಶ್ ತಿಳಿಸಿದರು.


     'ಗೌರಿ’ ಚಿತ್ರದ ಟ್ರೇಲರ್ ಸುದೀಪ್ ಅವರು ಬಿಡುಗಡೆ ಮಾಡಿದಕ್ಕೆ ಸಂತಸ ವ್ಯಕ್ತಪಡಿಸಿದ ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯಾ ಅಯ್ಯರ್, "ಆಗಸ್ಟ್ ಹದಿನೈದರಂದು ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ" ಎಂದರು.


     ನೈಜ ಘಟನೆ ಆಧರಿಸಿ ನಿರ್ಮಾಣವಾಗಿರುವ ‘ಗೌರಿ’ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ (ವಿಶೇಷ ಪಾತ್ರ), ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ಕಾಂತಾರ ಖ್ಯಾತಿಯ ಮಾನಸಿ ಸುಧೀರ್ ಸಂಪತ್ ಮೈತ್ರೇಯ, ಚಂದುಗೌಡ ಸೇರಿದಂತೆ ಬಹಳಷ್ಟು ಜನ ನಟಿಸಿದ್ದಾರೆ. ಚಿತ್ರಕ್ಕೆ

ಎ ಜೆ ಶೆಟ್ಟಿ ಹಾಗೂ ಕೃಷ್ಣಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.
















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್