LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಒಂದು ಸಾವಿರ ರೋಬೋಟಿಕ್ಶಸ್ತ್ರಚಿಕಿತ್ಸೆ ಸಾಧನೆ!

ಕ್ಯಾನ್ಸರ್ ರೋಗಿಗಳಿಗೆ ಉಚಿತ, ಕೈಗೆಟಕುವ ಬೆಲೆಯಲ್ಲಿ ಚಿಕಿತ್ಸೆನೀಡುವುದೇ ಧ್ಯೇಯ

*ಬೆಂಗಳೂರು, ಜನವರಿ, 24:* ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ.

ಮೊದಲ ಬಾರಿಗೆ ರೋಬೊಟಿಕ್ ಯಂತ್ರ ಅಳವಡಿಕೆ ಮಾಡಿಕೊಂಡ ಏಕೈಕಆಸ್ಪತ್ರೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಾಗಿದೆ. ಅತ್ಯಾಧುನಿಕರೋಬೊಟಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇದುವರೆಗೆ ಒಂದುಸಾವಿರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ವಿಶೇಷಮೈಲುಗಲ್ಲು ಸಾಧಿಸಿದೆ. ಸರಕಾರಿ ಸಂಸ್ಥೆಗಳ ಪೈಕಿ ಕಿದ್ವಾಯಿ ಸ್ಮಾರಕ ಗಂಥಿಆಸ್ಪತ್ರೆಯಲ್ಲಿ ಮಾತ್ರ ರೋಬೋಟಿಕ್ ಸರ್ಜರಿ ಸೌಕರ್ಯ ಇರುವುದುಮತ್ತೊಂದು ಹೆಗ್ಗಳಿಕೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಹಲವು ಸಾಧನೆಗಳನ್ನು ಮಾಡುವಲ್ಲಿದಾಫುಗಾಲಿಡುತ್ತಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕಯೋಜನೆಯಡಿ ಹೆಚ್ಚು ಚಿಕಿತ್ಸೆ ನೀಡಿದ ಆಸ್ಪತ್ರೆಯಾಗಿ ಹೊರಹೊಮ್ಮಿದೆ. ಒಳರೋಗಿಗಳಿಗೆ ಹೆಚ್ಚು ಚಿಕಿತ್ಸೆ ನೀಡಿದ ಏಕೈಕ ಸೂಪರ್‌ ಸ್ಪೆಷಾಲಿಟಿಆಸ್ಪತ್ರೆ ಎಂಬ ಗೌರವಕ್ಕೂ ಕಿದ್ವಾಯಿ ಸಂಸ್ಥೆ ಪಾತ್ರವಾಗಿದೆ. ರಾಜ್ಯದಲ್ಲೇಏಕೈಕ ಬೋನ್ ಮ್ಯಾರೋ (ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ) ಘಟಕಕಿದ್ವಾಯಿಯಲ್ಲಿ ಇದ್ದು, ಅಲೋಜೆನಿಕ್, ಆಟೋಲೋಗಸ್ ಅಸ್ತಿಮಜ್ಜೆಕಸಿ ಚಿಕಿತ್ಸೆ ಯಶಸ್ವಿಗೊಳಿಸಲಾಗಿದೆ.

ಕಿದ್ವಾಯಿ ಸಂಸ್ಥೆಯಲ್ಲಿ ರೋಗಿಗಳಿಗೆ ಅನುಕೂಲವಾಗಲು ಕೆಸಿಡಿಎಫ್ಔಷಧಿ ಮಳಿಗೆ 24ಗಂಟೆಯೂ ಔಷಧ ಮಳಿಗೆ ತೆರೆಯಲಾಗಿದೆ. ಕೆಎಸ್ಆರ್‌ ಟಿಸಿ ನೌಕರರಿಗೆ ಕ್ಯಾಷ್‌ ಲೆಸ್‌ ಚಿಕಿತ್ಸೆ ನೀಡಲೂತೀರ್ಮಾನಿಸಲಾಗಿದೆ. ಬಿಪಿಎಲ್ ಸೌಲಭ್ಯ ಇಲ್ಲದ ಕುಟುಂಬಗಳಿಗೆ ಹಾಗೂಹಣದ ಸಮಸ್ಯೆ ಇರುವವರಿಗೆ ಚಿಕಿತ್ಸಾ ವೆಚ್ಚ ಕಡಿಮೆ ಮಾಡಲು ಪ್ರತ್ಯೇಕಸಮಿತಿ ರಚಿಸಲಾಗಿದೆ.

ಸಚಿವ ಶರಣ್ ಪ್ರಕಾಶ್ ಪಾಟೀಲ್ ಶ್ಲಾಘನೆ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೋಬೊಟಿಕ್ ಶಸ್ತ್ರ ಚಿಕಿತ್ಸೆಪೂರೈಸಿರುವುದು ಶ್ಲಾಘನೀಯ. ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ರೋಗಿಗಳಿಗೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಹಾಗೂ ಕೈಗೆಟುಕುವಬೆಲೆಯಲ್ಲಿ ವಿಶ್ವ ದರ್ಜೆಯ ಕ್ಯಾನ್ಸರ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು*ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಭಿವೃದ್ದಿ , ಜೀವನೋಪಾಯ ಇಲಾಖೆಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್* ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯು ನೂತನ ವೈದ್ಯಕೀಯ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ರೋಗಿಗಳಿಗೆ ಶೀಘ್ರಗತಿಯಲ್ಲಿ ಉತ್ತಮಗುಣಮಟ್ಟದ ಚಿಕಿತ್ಸೆ ನೀಡುತ್ತಿದೆ ರೋಬೊಟಿಕ್ ತಂತ್ರಜ್ಞಾನದಿಂದ 9 ವರ್ಷದಲ್ಲಿ 1 ಸಾವಿರ ಶಸ್ತ್ರ ಚಿಕಿತ್ಸೆ ನೀಡಿರುವುದು ಇತಿಹಾಸವಾಗಿದೆ. ರೋಗಿಗಳ ಆರೈಕೆಯಲ್ಲಿ ಕಿದ್ವಾಯಿ ಸಂಸ್ಥೆ ಮುಂಚೂಣಿಯಲ್ಲಿದೆ. ಅಲ್ಲದೇನಮ್ಮ ಸಂಸ್ಥೆಯು ವಿಶ್ವಮಟ್ಟದಲ್ಲಿ ಹಾಗೂ ದೇಶದಲ್ಲಿಯೇ ಭಾರತದಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಕಿದ್ವಾಯಿ ಸಂಸ್ಥೆಯ ಸಾಧನೆ ಗಮನಾರ್ಹ ಎಂದು ಸಚಿವ ಶರಣ್ ಪ್ರಕಾಶ್ಪಾಟೀಲ್ ತಿಳಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್