Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಮಲ್ ಚಿತ್ರ  ರೋಲೆಕ್ಸ್  ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ


     ಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು ಮೋಹನಕೃಷ್ಣ ಅವರು ಕನ್ನಡದಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ‌‌'ರೋಲೆಕ್ಸ್'.

      ಈ ಹಿಂದೆ ಬಿಲ್ ಗೇಟ್ಸ್  ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಸಿ.ಶ್ರೀನಿವಾಸ್ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು,  ನಾಯಕನಾಗಿ ಕೋಮಲ್ ಕುಮಾರ್ ನಟಿಸುತ್ತಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಕೋಮಲ್ ಕುಮಾರ್ ಅವರು 'ರೋಲೆಕ್ಸ್' ಚಿತ್ರದಲ್ಲಿ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

     ಕಾಮಿಡಿಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಹಾಗೂ ಒಂದು ಹಾಡಿನ ಚಿತ್ರೀಕರಣ ಮುಕ್ತಾಯವಾಗಿದೆ‌. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಅದು ಮುಕ್ತಾಯವಾದರೆ, 'ರೋಲೆಕ್ಸ್' ಚಿತ್ರದ ಚಿತ್ರೀಕರಣ ಸಂಪೂರ್ಣವಾಗುತ್ತದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

     ಅಚ್ಯುತಕುಮಾರ್, ನವೀನ್ ಪಡೀಲ್, ಅರುಣ ಬಾಲರಾಜ್ ಪ್ರಮುಖಪಾತ್ರದಲ್ಲಿ ನಟಿಸಿದ್ದು, ನಿರ್ಮಾಪಕರಾದ ಅಂಬಟಿ ಮಧು ಮೋಹನ್ ಕೃಷ್ಣ ಅವರು ಸಹ ಮುಖ್ಯಪಾತ್ರದಲ್ಲಿದ್ದಾರೆ.

     ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಸಂಕಲನ, ಮುರಳಿಕೃಷ್ಣ  ನಿರ್ಮಾಣ ನಿರ್ವಹಣೆ ಇದೆ. ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*