LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿದ್ಯಾರ್ಥಿಗಳ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಿದ ಅಧಿಕಾರಿಗಳಿಗೆ ಅಭಿನಂದನೆ

ಮಹಾಲಿಂಗಪುರ: ಮಹಾಲಿಂಗಪುರದಿಂದ ಸಂಗಾನಟ್ಟಿ, ಮದಭಾವಿ ಮತ್ತು ಮಾರಾಪುರ ಗ್ರಾಮಗಳಿಗೆ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಾರಿಗೆ ಸೌಕರ್ಯದ ಕೊರತೆಯಿಂದ ಉಂಟಾಗುತ್ತಿದ್ದ ತೊಂದರೆಯನ್ನು ಗಮನಿಸಿ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸದಾಗಿ ಸಂಜೆ ೪:೧೫ ಗಂಟೆಗೆ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಈ ಕ್ರಮಕ್ಕೆ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ದಿನಾಂಕ ೦೮-೦೬-೨೦೨೬ ರಂದು ಈ ಗ್ರಾಮಗಳ ವಿದ್ಯಾರ್ಥಿಗಳು ಸಾರಿಗೆ ಸೌಕರ್ಯವಿಲ್ಲದೆ ನಿತ್ಯ ಅನುಭವಿಸುತ್ತಿದ್ದ ತೊಂದರೆಯನ್ನು ಅರಿತ ಸಮಾಜ ಸೇವಕರಾದ ಸುರೇಶ್ ತಳಗಡೆ ಮತ್ತು ಅಶೋಕ್ ತಳಗಡೆಯವರು, ತಕ್ಷಣವೇ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ವಿದ್ಯಾ ನಾಯಕ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಡಿಪೋ ಮ್ಯಾನೇಜರ್ ಅವರು, ಪ್ರತಿದಿನ ಸಂಜೆ ೪:೧೫ಕ್ಕೆ ಸಂಗಾನಟ್ಟಿ, ಮದಭಾವಿ ಮತ್ತು ಮಾರಾಪುರ ಗ್ರಾಮಗಳಿಗೆ ಬಸ್ ಸಂಚಾರವನ್ನು ಆರಂಭಿಸಿದ್ದಾರೆ.
ಈ ನೂತನ ಸಾರಿಗೆ ಸೌಲಭ್ಯದ ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಬಸ್ಸಿಗೆ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಲಕ್ಷ್ಮಣ ನಾವಿ, ಅಶೋಕ್ ತಳಗಡೆ, ಸುರೇಶ ತಳಗಡೆ, ಶಿವನಿಂಗ ಚಂದರಗಿ, ಆನಂದ ತಳಗಡೆ, ರವಿ ರಂಜನಿಗಿ, ಶಾಲಾ ಶಿಕ್ಷಕರು,ಗ್ರಾಮಸ್ಥರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಕಾಲದಲ್ಲಿ ಬಸ್ ಸೌಲಭ್ಯ ಕಲ್ಪಿಸಿದ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ವಿದ್ಯಾ ನಾಯಕ್ ಅವರಿಗೆ ಗ್ರಾಮಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್