LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ಜತೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು, ಅಕ್ಟೋಬರ್ 11: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ರೈತರು ಭಾರೀ ಸಂಕಷ್ಟಕ್ಕೊಳಗಾಗಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಬೆಳೆಗಳು ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳೆ ಹಾನಿ ಅಧ್ಯಯನಕ್ಕಾಗಿ ಶೀಘ್ರದಲ್ಲೇ ಕೇಂದ್ರದಿಂದ ತಂಡ ಕಳುಹಿಸುವಂತೆ ಮತ್ತು ಪರಿಹಾರ ನೀಡುವಂತೆ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ.





ನೈಋತ್ಯ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 12.54 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದರು. ಭೀಮಾ ಜಲಾನಯನ ಪ್ರದೇಶದಲ್ಲಿನ ಪ್ರವಾಹದೊಂದಿಗೆ ಸೆಪ್ಟೆಂಬರ್‌ನಲ್ಲಿಉತ್ತರ ಕರ್ನಾಟಕದ ಜಿಲ್ಲೆಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದವು. ಎರಡನೇ ಸುತ್ತಿನ ಪ್ರವಾಹವು ಮುಖ್ಯವಾಗಿ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್‌ಗಳಷ್ಟು ಹೆಚ್ಚುವರಿ ಬೆಳೆ ನಷ್ಟಕ್ಕೆ ಕಾರಣವಾಯಿತು ಎಂದು ಅವರು ಮಾಹಿತಿ ನೀಡಿದ್ದರು. ಪ್ರವಾಹ ಪೀಡಿತ ರೈತರಿಗೆ ಬೆಳೆಹಾನಿ ಪರಿಹಾರಕ್ಕೆಂದು 2000 ಕೋಟಿ ರೂ. ನಿಗದಿ ಮಾಡಲಾಗಿದ್ದು, 30 ದಿನಗಳಲ್ಲಿ ನೇರ ಬ್ಯಾಂಕ್ ಖಾತೆಗೆ ವರ್ಗಾವಣೆ ಮೂಲಕ ಹಣ ಪಾವತಿಸುವುದಾಗಿಯೂ ಅವರು ಭರವಸೆ ನೀಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್