LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜನ ಸಾಮಾನ್ಯರೂ ಇಂದಿರಾ ಕ್ಯಾಂಟಿನ್ ಸೌಲಭ್ಯ ಪಡೆಯುವಂತಾಗಲಿ : ಲಕ್ಕಣ್ಣ ಸವಸುದ್ದಿ

ಮೂಡಲಗಿ : ಇಂದಿರಾ ಕ್ಯಾಂಟಿನ್ ರಾಜ್ಯ ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾಗಿದ್ದು, ಅತೀ ಕಡಿಮೆ ಬೆಲೆಯಲ್ಲಿ ಸಿಗುತ್ತಿರುವ ಊಟ ಹಾಗೂ ಉಪಹಾರದ ಸೌಲಭ್ಯಗಳನ್ನು ಈ ಭಾಗದ ಜನ ಸಾಮಾನ್ಯರು ಪಡೆದುಕೊಳ್ಳಬೇಕೆಂದು ಅರಭಾವಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಮನವಿ ಮಾಡಿದರು.



ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆ ಹತ್ತಿರ ಇತ್ತೀಚೆಗಷ್ಟೆ ಪ್ರಾರಂಭವಾದ ಇಂದಿರಾ ಕ್ಯಾಂಟಿನ್ ಗೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿ ಮಾತನಾಡಿದ ಅವರು, ಕ್ಯಾಂಟಿನ್ ಸಿಬ್ಬಂದಿಯೊಂದಿಗೆ ಚರ್ಚಿಸಲಾಗಿ ಸಧ್ಯಕ್ಕೆ ಸರ್ಕಾರದಿಂದ ಈ ಕ್ಯಾಂಟಿನ್ ನಲ್ಲಿ ಗ್ರಾಹಕರಿಗೆ ದಿನಕ್ಕೆ 300 ಪ್ಲೇಟ್ ಊಟೋಪಹಾರ ಒದಗಿಸುವ ಗುರಿಯಿದ್ದು ಇನ್ನೂ ಹೆಚ್ಚಿನ ಬೇಡಿಕೆಯಿದೆ. ಆದಷ್ಟು ಬೇಗ ಸಂಬಂಧಪಟ್ಟ ಮೇಲಿನ ಅಧಿಕಾರಿಗಳ ಜೊತೆ ಮಾತನಾಡಿ ದಿನಕ್ಕೆ 500ಪ್ಲೇಟ್ ವರೆಗೆ ಸೌಲಭ್ಯ ಒದಗಿಸುವ ಕುರಿತು ಮನವಿ ಮಾಡಲಾಗುವುದು ಎಂದರು.



ಕ್ಯಾಂಟೀನ್ ಸಿಬ್ಬಂದಿಗೆ ಶುಚಿ ರುಚಿ ಜೊತೆ ಗುಣಮಟ್ಟ ಸುಧಾರಿಸುವ ಕುರಿತು ಕಿವಿಮಾತು ಹೇಳಿದ ಸವಸುದ್ದಿಯವರು ನಂತರ ಪಟ್ಟಣದ ಭಾಜೀ ಮಾರ್ಕೆಟ್ ನಲ್ಲಿ ನಿರ್ಮಾಣವಾಗುತ್ತಿರುವ ವ್ಯಾಪಾರ ಮಳಿಗೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.



ಈ ಸಂಧರ್ಭದಲ್ಲಿ ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಮಹಾಲಿಂಗಯ್ಯ ನಂದಗಾಂವಮಠ, ಸದಾಶಿವ ಮುರಗೋಡ, ವಿಠ್ಠಲ್ ಸುಲ್ತಾನಪೂರ, ಅನೇಕ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ