ಬೆಂಗಳೂರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ನಾಯಕರಾದ ಬಿ ಕೆ ಹರಿಪ್ರಸಾದ ಅವರಿಗೆ ಮಾಜಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಅಭಿನಂದಿಸಿದರು, ಸತ್ಕರಿಸಿ,ಸನ್ಮಾನಿಸಿದರು.
ದಶಕಗಳ ನಿಮ್ಮ ರಾಜಕೀಯ ಅನುಭವ, ಸೈದ್ಧಾಂತಿಕ ಬದ್ಧತೆ ಹಾಗೂ ಪಕ್ಷದ ಮೇಲಿರುವ ನಿಷ್ಠೆ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಸಂಘಟಿಸಲು ಮತ್ತು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸಲು ಶಕ್ತಿಯಾಗಲಿ ಎಂದರು.
ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲಿಯವರೆಗೆ ಸಮರ್ಥ ನಾಯಕತ್ವ ನೀಡಿ, ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸಿದ ನೂತನ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ಅವರ ಪರಿಶ್ರಮ ಪ್ರಶಂಸನೀಯ. ಅವರ ನೇತೃತ್ವದಲ್ಲಿ ರಾಜ್ಯದ ಜನರಿಗೆ ಹೆಚ್ಚಿಗೆ ಪ್ರಯೋಜನ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
