LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಲಕ್ಷ್ಮೀ ಹೆಬ್ಬಾಳಕರ್ ಫೇಸ್‌ಬುಕ್ ಪೇಜ್‌ಗೆ 5 ಲಕ್ಷ ಫಾಲೋವರ್ಸ್: ಅಭಿಮಾನಿಗಳು, ಕಾರ್ಯಕರ್ತರಿಗೆ ಕೃತಜ್ಞತೆ

ಬೆಳಗಾವಿ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧಿಕೃತ ಫೇಸ್‌ಬುಕ್ ಪೇಜ್‌ ಅನ್ನು ಅನುಸರಿಸುವವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು, ಸರ್ಕಾರದ ಯೋಜನೆಗಳು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಜನಪರ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ಅಭಿಪ್ರಾಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದು, ಅದಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು, “ಸಾರ್ವಜನಿಕ ಸೇವೆ ಮತ್ತು ಸಂವೇದನಾಶೀಲ ಹಾದಿಯಲ್ಲಿ ನನ್ನ ಫೇಸ್‌ಬುಕ್ ಪುಟ ಇಂದು ಮತ್ತೊಂದು ಮೈಲಿಗಲ್ಲನ್ನು ದಾಟಿದೆ. ಇದು ಕೇವಲ ಸಂಖ್ಯೆಯಲ್ಲ, ನನ್ನ ಮೇಲೆ ನೀವು ಇಟ್ಟಿರುವ ನಂಬಿಕೆ ಮತ್ತು ಜವಾಬ್ದಾರಿಯ ಸಂಕೇತ. ಪ್ರತಿಯೊಂದು ಹರಕೆ, ಬೆಂಬಲ ಮತ್ತು ಪ್ರೋತ್ಸಾಹಕ್ಕೂ ಹೃದಯಪೂರ್ವಕ ಧನ್ಯವಾದಗಳು” ಎಂದು ತಿಳಿಸಿದ್ದಾರೆ.
ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಯೋಜನೆಗಳು ಹಾಗೂ ಜನಪರ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕಾರ್ಯ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಸಚಿವೆಯ ಫೇಸ್‌ಬುಕ್ ಪೇಜ್ 5 ಲಕ್ಷ ಫಾಲೋವರ್ಸ್ ದಾಟಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್