LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. ‌


ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ.

ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು.

ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿ ಕಾರಿದರು.


ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ ಗಾಯ. ಪೊಲೀಸರು ಎನ್ ಕೌಂಟರ್ ಮಾಡುತ್ತಿದ್ದರು, ಅಂತಾರಲ್ಲಾ, ನಾಚಿಕೆ ಆಗಲ್ವ ನಿಮಗೆ. ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ, ಸಾಧ್ಯವಾದರೆ ಭೇಟಿ ಯಾಗುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


 *ಸಿ.ಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದ ಸಚಿವರು:

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು.  ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌


ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ:

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ನಾಯಕರು ನನಗೆ ಧೈರ್ಯ ತುಂಬಿದರು ಎಂದರು.

ಸಿ.ಟಿ.ರವಿ ಬೆಳಗಾವಿ ಚಲೋ ಮಾಡುವ ಬಗ್ಗೆ ಕೇಳಿದಾಗ,


 ‌ಬೆಳಗಾವಿ ಶಾಂತಿಯ ತೋಟ. ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಂಡು ಇಲ್ಲಿಗೆ ಯಾರು ಬೇಕಾದರೂ ಬರಬಹುದು. ಅಂತಹ ವ್ಯಕ್ತಿಗಳಿಗೆ ತುಂಬು ಹೃದಯದ ಸ್ವಾಗತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ