LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

‘ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭಾಗವಾಗಲಿ’:ಚಂದ್ರಶೇಖರನಾಥ ಸ್ವಾಮೀಜಿ

ಬೆಂಗಳೂರು, ಜೂನ್ 29: ಡಿಸಿಎಂ ಡಿಕೆ ಶಿವಕುಮಾರ್​ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಸಿದ್ದರಾಮಯ್ಯನವರಲ್ಲಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಬಹಿರಂಗವಾಗಿ ಮನವಿ ಮಾಡಿದ್ದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.

ಈ ಮಧ್ಯೆ, ತಮ್ಮ ಹೇಳಿಕೆಯನ್ನು ಸಮರ್ಥಿಸಿ ‘ಟಿವಿ9’ ಜತೆ ಮಾತನಾಡಿರುವ ಸ್ವಾಮೀಜಿ, ಅಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ್ದು ವೈಜ್ಞಾನಿಕವಾಗಿ ಅಷ್ಟೆ. ಸಿಎಂ ಹುದ್ದೆ ವಿಚಾರವಲ್ಲದೆ ಇನ್ನೂ ಮೂರು ಅಂಶಗಳನ್ನು ಪ್ರಸ್ತಾಪಿಸಿದ್ದೆ ಎಂದು ತಿಳಿಸಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ ಎಂದಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಆಡಿದ ಮಾತುಗಳಿಗೆ ಮತ್ತು ನಿಲುವಿಗೆ ಇಂದೂ ಸಹ ಬದ್ಧನಾಗಿದ್ದೇನೆ. ಕೆಂಪೇಗೌಡರ ಜಯಂತಿಯಂದು 3 ವಿಚಾರಗಳನ್ನು ಪ್ರಸ್ತಾಪ ಮಾಡಿದ್ದೆ. ಮೊದಲ ಅಂಶ ಬೆಂಗಳೂರು ವಿಭಜನೆಗೆ ಸಂಬಂಧಿಸಿದ್ದು. ಬೆಂಗಳೂರನ್ನು 3 ಅಥವಾ 5 ಭಾಗ ಮಾಡುವುದು ಬೇಡ ಎಂಬ ವಿಚಾರದ ಬಗ್ಗೆ ಮಾತನಾಡಿದ್ದೆ. ಕೆಂಪೇಗೌಡರೆಂದರೆ ಬೆಂಗಳೂರು, ಬೆಂಗಳೂರೆಂದರೆ ಕೆಂಪೇಗೌಡರು. ಆದ್ದರಿಂದ ಬೆಂಗಳೂರು ವಿಭಜನೆ ಮಾಡಿದರೆ ಕೆಂಪೇಗೌಡರ ಹೆಸರು ಹೋಗುತ್ತೆ. ಕೆಂಪೇಗೌಡ ಉಳಿಯಬೇಕಾದ್ರೆ ಬೆಂಗಳೂರು ಒಂದಾಗಿರಬೇಕು ಎಂದು ಹೇಳಿದ್ದೆ.

ಎರಡನೆಯೇ ಅಂಶವೆಂದರೆ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎರಡು ಭಾಗ ಆಗಲಿ ಎಂಬುದು. ಎರಡು ಭಾಗ ಆದಾಗ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ ಎಂದು ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ