LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯೋಗ ಜೀವನದ ಭಾಗವಾಗಲಿ: ನ್ಯಾ. ಸಿದ್ದಲಿಂಗ ಪ್ರಭು

 

 

ಬಳ್ಳಾರಿ,ಜೂ.23 : ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ 'ಅಂತರರಾಷ್ಟ್ರೀಯ ಯೋಗ ದಿನ' ಆಚರಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ನ್ಯಾಯಾಂಗ ಕ್ಷೇತ್ರದಲ್ಲಿ ಕೆಲಸ ಮಾಡುವ ಅಧಿಕಾರಿಗಳು, ವಕೀಲರು ಮತ್ತು ಸಿಬ್ಬಂದಿ ನಿರಂತರ ಮಾನಸಿಕ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಶಾಂತಿ, ದೈಹಿಕ ಆರೋಗ್ಯ ಮತ್ತು ಕೆಲಸದಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಪ್ರತಿಯೊಬ್ಬರೂ ಯೋಗವನ್ನು ತಮ್ಮ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪತಂಜಲಿ ಯೋಗ ಶಿಕ್ಷಣ ಸಮಿತಿ ಬಳ್ಳಾರಿ ಶಾಖೆಯ ಸದಸ್ಯರೂ ಹಾಗೂ ಬಳ್ಳಾರಿ ವಕೀಲರ ಸಂಘದ ಅಧ್ಯಕ್ಷರೂ ಆದ ರಾಮಬ್ರಹ್ಮಂ ಅವರು ಮಾತನಾಡಿ, ನ್ಯಾಯಾಲಯದ ವತಿಯಿಂದ ಇಂತಹ ಉತ್ತಮ ಆರೋಗ್ಯ ಪೂರಕ ಕಾರ್ಯಕ್ರಮ ಹಮ್ಮಿಕೊಂಡಿದ್ದಕ್ಕೆ ಧನ್ಯವಾದ ಸಮರ್ಪಿಸಿದರು. ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುವುದರ ಜೊತೆಗೆ ಮಾನಸಿಕ ನೆಮ್ಮದಿ ಕಂಡುಕೊಳ್ಳಲು ಸಹಾಯವಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ನೆರೆದಿದ್ದವರಿಗೆ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮದ ಮಹತ್ವವನ್ನು ತಿಳಿಸಿಕೊಟ್ಟು, ಪ್ರಾಯೋಗಿಕವಾಗಿ ಯೋಗಾಭ್ಯಾಸ ಮಾಡಿಸಿದರು.

ಭಾಗವಹಿಸಿದವರೆಲ್ಲರೂ ದೇಹಕ್ಕೆ ಪೂರಕವಾದ ವಿವಿಧ ಆಸನಗಳು, ಮನಸ್ಸನ್ನು ಪ್ರಶಾಂತಗೊಳಿಸುವ ಅನುಲೋಮ-ವಿಲೋಮ, ಕಪಾಲಭಾತಿ ಪ್ರಾಣಾಯಾಮ ಮತ್ತು ಧ್ಯಾನವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಬಳ್ಳಾರಿ ನಗರದ 1 ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಹೆಚ್.ಎ.ಮೋಹನ್, 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪ್ರಮೋದ.ಬಿ.ಜಿ., ಜಿಲ್ಲಾ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ವೆಂಕಟೇಶ್, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ನಸ್ರತ್ ಮುಖಾರ್ ಅಹ್ಮದ್ ಖಾನ್, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಪ್ರಿಯಾಂಕ ಟಿ.ಕೆ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ನಾಗೇಶ್ ನಾಯ್ಕ, 1 ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಿದ್ದಲಿಂಗಯ್ಯ ಗಂಗಾಧರಮಠ, 2 ನೇ ಅಪರ ಸಿವಿಲ್ ನ್ಯಾಯಾಧೀಶರಾದ ದೇವರೆಡ್ಡಿ, 4 ನೇ ಅಪರ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮಿ ಭವಾನಿ ಶಂಕ್ರಪ್ಪ, 5 ನೇ ಅಪರ ಸಿವಿಲ್ ನ್ಯಾಯಾಧೀಶರಾದ ಕೌಶಲ್ ಸೇರಿದಂತೆ ಬಳ್ಳಾರಿ ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ವಕೀಲರು ಹಾಗೂ ನ್ಯಾಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತ್ತು ಪತಂಜಲಿ ಯೋಗ ಶಿಕ್ಷಣಾ ಸಮಿತಿ ಬಳ್ಳಾರಿ ಶಾಖೆಯ ಸದಸ್ಯರು ಮತ್ತು ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಯೋಗಾಸನ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ