LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತಪ್ಪದೇ ಪೋಲಿಯೋ ಹನಿ ಹಾಕಿಸಿ ಮಕ್ಕಳನ್ನು ಕಾಪಾಡೋಣ

ಹಸಿರು ಕ್ರಾಂತಿ ವರದಿ ವಿಜಯಪುರ

ಪೋಲಿಯೋ ಮಾರಣಾಂತಿಕ ಕಾಯಿಲೆಯಾಗಿದ್ದು, ಹೆಚ್ಚಾಗಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೇ ಈ ಕಾಯಿಲೆಗೆ ತುತ್ತಾಗುವುದರಿಂದ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋದಿಂದ ಮಕ್ಕಳನ್ನು ಕಾಪಾಡೋಣ ಎಂದು ಎಐಸಿಸಿ ಮಾಜಿ ಸದಸ್ಯೆ ಹಾಗೂ ಕಾಂಗ್ರೆಸ್‌ ಯುವ ನಾಯಕಿ ಶ್ರೀದೇವಿ ಉತ್ಲಾಸರ ಹೇಳಿದರು.

ಶಾಂತಿ ನಗರದ ಆರೋಗ್ಯ ಕೇಂದ್ರದಲ್ಲಿ ಪೋಲಿಯೋ ಲಿಸಿಕಾ ಕಾರ್ಯಕ್ರಮದಲ್ಲಿ ಪೋಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 1953 ರಲ್ಲಿ ಪೋಲಿಯೋ ಲಸಿಕೆ ಅಭಿವೃದ್ಧಿಪಡಿಸಿದ ನಂತರ ಪೋಲಿಯೊ ಪ್ರಕರಣಗಳು ಗಮನಾರ್ಹ ಇಳಿಕೆ ಕಂಡಿವೆ. ಕೆಲವು ದೇಶಗಳಲ್ಲಿ ಪೋಲಿಯೋ ಇನ್ನೂ ಜೀವಂತವಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಮ್ಮ ಸರ್ಕಾರಗಳು ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸಿರುವುದರಿಂದ ಪೋಲಿಯೋ ಲಸಿಕಾ ಕಾರ್ಯಕ್ರಮಗಳು ಮುಂದುವರೆದಿವೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸದೇ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ವಿರುದ್ಧ ಹೋರಾಡಲು ಮಕ್ಕಳ ಆತ್ಮಬಲ ಹೆಚ್ಚಿಸೋಣ ಎಂದು ಮನವಿ ಮಾಡಿದರು.

ಡಾ.ಶ್ರೀಧರ ಓತಗೇರಿ ಮಾತನಾಡಿ, ನರಮಂಡಲದ ಮೇಲೆ ಪರಿಣಾಮ ಬೀರುವ ಪೋಲಿಯೋ ವೈರಸ್‌ ಸೋಂಕಿತ ವ್ಯಕ್ತಿಯ ಬೆನ್ನುಹುರಿ ಮತ್ತು ಮೆದುಳಿನ ಮೇಲೆ ದಾಳಿ ಮಾಡುವ ಪರಿಣಾಮ ಮಗುವಿನ ದೇಹದ ಕೆಲವು ಭಾಗಗಳನ್ನು ಚಲಿಸಲು ಸಾಧ್ಯವಾಗದ ಕಾರಣ ಪಾರ್ಶ್ವವಾಯು ಉಂಟಾಗುತ್ತದೆ. ಪೋಲಿಯೋ ವೈರಸ್‌ನಿಂದ ಸೋಂಕಿಗೆ ಒಳಗಾದ ಕೆಲವರು ಪಾರ್ಶ್ವವಾಯು (ಅಬಾರ್ಟಿವ್ ಪೋಲಯೋ) ಕ್ಕೆ ಕಾರಣವಾಗದ ಒಂದು ರೀತಿಯ ಪೋಲಿಯೋಗೆ ತುತ್ತಾಗುತ್ತಾರೆ. ಸಾಮಾನ್ಯವಾಗಿ ಇದು ಇತರ ವೈರಲ್ ರೋಗಗಳ ವಿಶಿಷ್ಟವಾದ ಸೌಮ್ಯ, ಜ್ವರ ತರಹದ ಚಿಹ್ನೆಗಳು ಮತ್ತು ರೋಗ ಲಕ್ಷಣಗಳನ್ನುಂಟು ಮಾಡುತ್ತದೆ ಎಂದು ವಿವರಿಸಿದರು.

ಈ ವೇಳೆ ಪಿಎಚ್‌ಸಿಒ ರತ್ನ ಪೂಜಾರ ಸೇರಿದಂತೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ನಗರ ನಿವಾಸಿಗಳು ಉಪಸ್ಥಿತರಿದ್ದರು.

ಮಕ್ಕಳನ್ನು ಪೋಲಿಯೋ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಾಲಕರು 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕು. ಮಗುವಿನ ಮುಂದಿನ ಆರೋಗ್ಯಕರ ಭವಿಷ್ಯದ ದೃಷ್ಟಿಯಿಂದ ಪೋಲಿಯೋ ಹನಿ ಹಾಕಿಸುವುದು ಬಹಳಷ್ಟು ಅವಶ್ಯವಾಗಿದೆ.
-ಶ್ರೀದೇವಿ ಉತ್ಲಾಸರ, ಯುವ ನಾಯಕಿ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್