LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಪದಗ್ರಹಣ ಇಂದು

ಮೂಡಲಗಿ: ಲಯನ್ಸ ಕ್ಲಬ್ ಮೂಡಲಗಿ ಪರಿವಾರದ ೨೦೨೬-೨೭ನೇ ಸಾಲಿಗೆ ಅಧ್ಯಕ್ಷರಾಗಿ ಸುರೇಶ ದೇಸಾಯಿ ಅವರು ಆಯ್ಕೆಯಾಗಿರುವರು. ಕಾರ್ಯದರ್ಶಿಯಾಗಿ ಕೃಷ್ಣಾ ಕೆಂಪಸತ್ತಿ ಹಾಗೂ ಖಜಾಂಚಿಯಾಗಿ ಡಾ. ಯಲ್ಲಾಲಿಂಗ ಮುಳವಾಡ ಅವರು ಆಯ್ಕೆಯಾಗಿರುವರು. 
ಪದಗ್ರಹಣ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ೨೦೨೬-೨೭ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ ೧೧ರಂದು ಸಂಜೆ ೫ಕ್ಕೆ ಶಾರದಾ ಪಂಕ್ಷಣ ಹಾಲ್‌ದಲ್ಲಿ ಜರುಗಲಿದೆ. 
ಪದಗ್ರಹಣ ಅಧಿಕಾರಿಯಾಗಿ ಬೆಳಗಾವಿಯ ಭಾರತಿ ಉದಯ ವಡವಿ ಅವರು ಭಾಗವಹಿಸುವರು. ಮುಖ್ಯ ಅತಿಥಿಯಾಗಿ ಜಿಲ್ಲಾ ಲಯನ್ಸ್ ೩೧೭ ‘ಬಿ’ಯ ಪ್ರಾಂತೀಯ ಅಧ್ಯಕ್ಷ ಬಾಲಶೇಖರ ಬಂದಿ ಭಾಗವಹಿಸುವರು. ಕಳೆದ ವರ್ಷದಲ್ಲಿ ಲಯನ್ಸ್ ಕ್ಲಬ್‌ದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಅನ್ನದಾಸೋಹದ ಪ್ರಾಯೋಜಕರಿಗೆ ಹಾಗೂ ಉತ್ತಮ ಸಮಾಜ ಸೇವೆ ಮಾಡಿರುವ ವ್ಯಕ್ತಿಗಳಿಗೆ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ ಸನ್ಮಾನ ಇರುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಸಮಾರಂಭದ ಪೂರ್ವದಲ್ಲಿ ಪದಗ್ರಹಣ ದ್ಯೋತಕವಾಗಿ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ನೆಡಲಾಗುವುದು ಎಂದು ತಿಳಿಸಿದ್ದಾರೆ.  

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್