LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದ ಹಲವು ಆರ್​ಟಿಓ ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು, ಅಕ್ಟೋಬರ್​ 08: ಲೋಕಾಯುಕ್ತ  ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​​ಗಳ  ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್​​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್