LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಹಾನಗರ ಪಾಲಿಕೆ: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ,ಜೂ.13
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಮತ್ತು ವಸತಿ ರಹಿತರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಆಸಕ್ತರು ಆನ್ ಲೈನ್ ವೆಬ್‌ಸೈಟ್ https://pmay-urban.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜೂ.30 ಅರ್ಜಿ ಸಲ್ಲಿಸಲು ಕೊನೆಯ ದಿನ.
*ಬೇಕಾದ ದಾಖಲೆಗಳು:*
ಅರ್ಜಿದಾರರ ಆಧಾರ್ ಕಾರ್ಡ್ ಮತ್ತು ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ವಸತಿ ರಹಿತರಾಗಿದ್ದಲ್ಲಿ ನಿವೇಶನಕ್ಕೆ ಸಂಬAಧಿಸಿದ ದಾಖಲೆಗಳು(ಹಕ್ಕುಪತ್ರ, ಕ್ರಯಪತ್ರ, ದಾನಪತ್ರ, ಉಡುಗೊರೆ, ಖಾತಾ), ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ, ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ಸಂಖ್ಯೆ, ಪಾನ್ ಕಾರ್ಡ್(ಲಭ್ಯವಿದ್ದಲ್ಲಿ), ನಿಗಧಿತ ನಮೂನೆ (ಅನೆಕ್ಷರ್-2ಎ, 2ಬಿ, 2ಸಿ) ಯಲ್ಲಿ ಸೆಲ್ಪ್ ಅಂಡರ್‌ಟೆಕಿAಗ್ ಹೊಂದಿರಬೇಕು. ಈ ಮೇಲಿನ ದಾಖಲೆಗಳ ಜೊತೆಗೆ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯನ್ನೂ ಸಲ್ಲಿಸಬೇಕು.
ಈ ಹಿಂದೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಕಡ್ಡಾಯವಾಗಿ ಮಹಾನಗರ ಪಾಲಿಕೆಯ ವಲಯ ಕಚೇರಿ-2 ರ ಆಶ್ರಯ ಶಾಖೆಗೆ ಜೂ.30 ರೊಳಗಾಗಿ ಮೇಲೆ ತಿಳಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು. ಹೊಸದಾಗಿ ಅರ್ಜಿ ಸಲ್ಲಿಸಲು ಸಾಮಾನ್ಯ ಸೇವಾ ಕೇಂದ್ರ ಸೆಂಟರ್ ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಗಡಗಿ ಚೆನ್ನಪ್ಪ ವೃತ್ತ (ರಾಯಲ್ ಸರ್ಕಲ್) ಹತ್ತಿರದ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ಅಥವಾ ದೂ.08392-273479/278168 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್