LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿಮಾನ ಪತನ ದುರಂತ: ಉನ್ನತ ಮಟ್ಟದ ತನಿಖೆ ನಡೆಸುವಂತೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಕಲಬುರಗಿ: ಗುಜರಾತ್​ನ ಅಹಮದಾಬಾದ್‌ನಲ್ಲಿ  ಮಧ್ಯಾಹ್ನ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನ ದುರಂತದ ಬಗ್ಗೆ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.


ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಲವು ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹಾರುತ್ತಿದ್ದ ವೇಳೆ ಏಕಾಏಕಿ ಪತನವಾಗಿದ್ದು, ಈ ಸುದ್ದಿ ಕೇಳಿ ಬೇಸರವಾಯಿತು. ವಿಮಾನದಲ್ಲಿ ಭಾರತೀಯ ಮತ್ತು ಬ್ರಿಟಿಷ್ ನಾಗರಿಕರು ಇಬ್ಬರೂ ಇದ್ದರು ಎಂದು ವರದಿಯಾಗಿದೆ. ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಸಡನ್ ಆಗಿ ವಿಮಾನ ಜನವಸತಿ ಪ್ರದೇಶದಲ್ಲಿ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ಹಲವರ ಸಾವಿಗೆ ಕಾರಣವಾಗಿರುವ ಬಗ್ಗೆ ವರದಿಯಾಗಿದ್ದು, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.\




ವಿಮಾನ ಪತನವಾಗಲು ತಾಂತ್ರಿಕ ದೋಷವೋ ಅಥವಾ ಇತರ ಕಾರಣವೋ ಗೊತ್ತಾಗಿಲ್ಲ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯರು ಮತ್ತು ಬ್ರಿಟಿಷ್ ಪ್ರಜೆಗಳು ಇದ್ದರು ಎಂಬುದೂ ತಿಳಿದು ಬಂದಿದೆ. ದುರ್ಘಟನೆ ದೇಶದ ಜನತೆಗೆ ತೀವ್ರ ಆಘಾತ ನೀಡಿದೆ ಎಂದು ಖರ್ಗೆ ಹೇಳಿದ್ದಾರೆ.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ