LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿಗೆ ಶಾಕ್ ನೀಡಿದ ಮಮತಾ ಬ್ಯಾನರ್ಜಿ

2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ನಟಿ ಇದೀಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರ್ಯಶೈಲಿಯಿಂದ ಪ್ರೇರಿತರಾಗಿ, ಜನರ ಸೇವೆ ಮಾಡಲು ಬಿಜೆಪಿಯಲ್ಲಿ ಸೂಕ್ತ ಅವಕಾಶ ಸಿಗದ ಕಾರಣ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜೀ ಬಿಜೆಪಿಗೆ ಶಾಕ್‌ ನೀಡದ್ದಾರೆ.


ನಟಿ ಪರ್ನೋ ಮಿತ್ರಾ ಶುಕ್ರವಾರದಂದು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಪಕ್ಷದ ವಕ್ತಾರ ಜಯ ಪ್ರಕಾಶ್ ಮಜುಂದಾರ್ ಅವರ ಸಮ್ಮುಖದಲ್ಲಿ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದರು.


ಸಿಎಂ ಮಮತಾ ಬ್ಯಾನರ್ಜಿ ಅವರ ಕಾರ್ಯವೈಖರಿ ನನಗೆ ಬಹಳ ಇಷ್ಟವಾಗಿದೆ. ನಾನು ಜನರ ಹಿತದೃಷ್ಟಿಯಿಂದ ಟಿಎಂಸಿ ಸೇರುತ್ತಿದ್ದೇನೆ. ಮಮತಾ ಬ್ಯಾನರ್ಜಿ ಕಾರ್ಯವೈಖರಿ ರಾಜ್ಯದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಸಾರ್ವಜನಿಕರ ಹಿತಕ್ಕಾಗಿ ಕೆಲಸ ಮಾಡಲು ರಾಜಕೀಯ ಪ್ರವೇಶಿಸಿದ್ದೆ, ಆದ್ರೆ ಬಿಜೆಪಿಯಲ್ಲಿದ್ದುಕೊಂಡು ಜನಸೇವೆ ಮಾಡಲು ಹಾಗೂ ನಿರೀಕ್ಷಿಸಿದಷ್ಟು ಕೆಲಸ ಮಾಡಲು ಅವಕಾಶ ಸಿಗಲಿಲ್ಲ. ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಪರ್ನೋ ಮಿತ್ರಾ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ, ಬಿಜೆಪಿಯಲ್ಲಿ ಯಾರಿಂದಲೂ ಒಳ್ಳೆಯ ಜನಸೇವೆಯ ಕೆಲಸ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಟಿ ಪರ್ನೋ ಮಿತ್ರಾ ಬಿಜೆಪಿ ತೊರೆದು ಟಿಎಂಸಿಗೆ ಸೇರಿದ್ದಾರೆ ಎಂದು ಹೇಳಿದರು.

ಬಂಗಾಳದಲ್ಲಿ ತಮ್ಮದೇ ಆದ ಜನಪ್ರಿಯತೆಯನ್ನು ಹೊಂದಿರುವ ನಟಿ ಪರ್ನೋ ಮಿತ್ರಾ, 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿ. 2021ರ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು  ಬಾರಾನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತಪಸ್ ರಾಯ್ ವಿರುದ್ಧ ಪರ್ನೊ ಮಿತ್ರಾ ಸೋತಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್