LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಾದರಿ ನೀತಿ ಸಂಹಿತೆ ‘ಮೋದಿ ನೀತಿ ಸಂಹಿತೆ’ಯಾಗಿದೆ: ಮಮತಾ ಬ್ಯಾನರ್ಜಿ ಕಿಡಿನುಡಿ

ಪುರುಲಿಯಾ, 07: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದ್ದು, ಮಾದರಿ ನೀತಿ ಸಂಹಿತೆಯನ್ನು ‘ಮೋದಿ ನೀತಿ ಸಂಹಿತೆ’ಯಾಗಿ ಪರಿವರ್ತಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ವರಿಷ್ಠೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮನ್ನು ಮಾತ್ರ ಹಿಂದೂಗಳು ಎಂದು ಪರಿಗಣಿಸುತ್ತಾರೆ ಮತ್ತು ಅವರು ಇತರ ಸಮುದಾಯಗಳ ಬಗ್ಗೆ ಯೋಚಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮ "ದ್ವೇಷ ತುಂಬಿದ ಭಾಷಣಗಳ" ಮೂಲಕ ಕೆಳ ಜಾತಿಯ ಹಿಂದೂಗಳು, ಅಲ್ಪಸಂಖ್ಯಾತರು ಮತ್ತು ಇತರ ವರ್ಗದ ಜನರನ್ನು ಬೆದರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಮೌನವಾಗಿದೆ ಎಂದು ಮಮತಾ ಆರೋಪಿಸಿದ್ದಾರೆ.

 

 

ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ 'ಮೋದಿ ನೀತಿ ಸಂಹಿತೆ'ಯಾಗಿ ಮಾರ್ಪಟ್ಟಿದೆ: ಮಮತಾ

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

"ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ ಅಣಕವಾಗಿದೆ ಮತ್ತು ಅದನ್ನು ಮೋದಿ ನೀತಿ ಸಂಹಿತೆ ಎಂದು ಮರುನಾಮಕರಣ ಮಾಡಬೇಕು. ಆದರೆ ಈ ದೇಶದ ನಾಗರಿಕರ ಹಕ್ಕುಗಳ ಉಲ್ಲಂಘನೆಯ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ" ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಬ್ಯಾನರ್ಜಿ, ಇಷ್ಟೊಂದು ಸುಳ್ಳು ಹೇಳುವ ಮತ್ತೊಬ್ಬ ಪ್ರಧಾನಿಯನ್ನು ನಾನು ನೋಡಿಲ್ಲ ಎಂದಿದ್ದಾರೆ.

"ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ನೀಡುವುದಾಗಿ 2014 ರಲ್ಲಿ ನೀಡಿದ ಭರವಸೆ ಏನಾಯಿತು? ಉಚಿತ ಎಲ್‌ಪಿಜಿ ಗ್ಯಾಸ್ ನೀಡುವುದಾಗಿ ನೀಡಿದ ಭರವಸೆ ಏನಾಯಿತು? ಅವರ 'ಬೇಟಿ ಬಂಚಾವೋ ಬೇಟಿ ಪಡಾವೋ' ಯೋಜನೆ ಏನಾಯಿತು?" ಎಂದು ಪಶ್ಚಿಮ ಬಂಗಾಳ ಸಿಎಂ ಪ್ರಶ್ನಿಸಿದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್