ಬೆಂಗಳೂರು, ಆಗಸ್ಟ್ 28: ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಹವಣಿಸಿದ್ದ ಭಯೋತ್ಪಾದಕರಿಗೆ ಫಂಡಿಂಗ್ ಮಾಡಿದ್ದು ಯಾರು ಎಂಬುದರ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದೆ. ಭಯೋತ್ಪಾದಕ ಕೃತ್ಯ ಎಸಗುವವರ ಹಣದ ಮೂಲದ ಬಗ್ಗೆ ತನಿಖೆ ಚುರುಕುಗೊಂಡಿದ್ದು, ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರಿಕ್ನನ್ನುಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಶಾರಿಕ್ ಮಾತ್ರವಲ್ಲದೆ, ಪರಪ್ಪರ ಅಗ್ರಹಾರ ಜೈಲಿನಲ್ಲಿರುವ ಇತರ ಶಂಕಿತ ಉಗ್ರರನ್ನೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಿಗೆ, ಅಕ್ರಮ ಹಣ ಸಂದಾಯ ಆಗಿತ್ತು ಎಂಬ ಆರೋಪಗಳ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ಸೇರಿದಂತೆ ಪ್ರಕರಣದ ಇನ್ನಿತರ ಆರೋಪಿಗಳ ವಿಚಾರಣೆ ನಡೆಸಲಾಗಿದೆ. ವಿದೇಶದಿಂದ ಆರೋಪಿಗಳಿಗೆ ಹಣ ಸಂದಾಯ ಆಗಿರುವ ಬಗ್ಗೆ ಇಡಿ ತನಿಖೆ ಮಾಡುತ್ತಿದೆ. ನ್ಯಾಯಾಲಯದ ಅನುಮತಿ ಪಡೆದು ಜೈಲಿನಲ್ಲಿ ಶಂಕಿತ ಉಗ್ರರ ವಿಚಾರಣೆ ನಡೆಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.