LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥ

ಮಂಗಳೂರು, ಏಪ್ರಿಲ್ 12: ನಗರ ಹೊರವಲಯದ ಅಡ್ಯಾರ್‌ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ.  ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಅವರನ್ನು ಒಳಗೊಂಡ ತಂಡ ಗುರುವಾರ ಅಡ್ಯಾರ್‌ನ ಬೊಂಡ ಫ್ಯಾಕ್ಟರಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಾ.ತಿಮ್ಮಯ್ಯ, ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದ್ದು, ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಮಂಗಳೂರು, ಬಂಟ್ವಾಳದ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್