LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾರುತಿ ವಿಜಯನಗರ ನೇಮಕ

 ಬೆಳಗಾವಿ ಫೆ., 03-  ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್ ಬೆಂಗಳೂರು ಇದರ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಅವರು  ಮಾರುತಿ ವೀರಪ್ಪ ವಿಜಯನಗರ ಅವರನ್ನು ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಿ ನಿನ್ನೆ ನಡೆದ ರಾಜ್ಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಿದರು.

        ಈ ಮೊದಲು ಯಾದಗಿರಿ ರಾಜ್ಯ ವೈಜ್ಞಾನಿಕ ಸಮ್ಮೇಳನ 2025 ಯಶಸ್ವಿಗೆ ಶ್ರಮಿಸಿದ ಎಲ್ಲರನ್ನು ಆಮಂತ್ರಿಸಿದ ಲೋಕೋಪಯೋಗಿ ಸಚಿವರು ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಆದ  ಸತೀಶ ಜಾರಕಿಹೊಳಿ ಅವರು ತಮ್ಮ ಬೆಂಗಳೂರು ಗೃಹ ಕಚೇರಿಯಲ್ಲಿ ಎಲ್ಲರನ್ನೂ ಗೌರವಿಸಲು ಔತಣಕೂಟ ಏರ್ಪಡಿಸಿ ಪ್ರಶಂಶಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬರುವ ಡಿಸೆಂಬರದಲ್ಲಿ ಬೆಳಗಾವಿಯಲ್ಲಿ ನಡೆಯುವ ರಾಜ್ಯ ವೈಜ್ಞಾನಿಕ ಸಮ್ಮೇಳನ 2026 ಯಶಸ್ವಿಗೆ ಸಲಹೆಗಳನ್ನು ನೀಡಿದರು. ಸಚಿವರ ಸೂಚನೆ ಮೇರೆಗೆ ಅಖಂಡ ಬೆಳಗಾವಿ ಜಿಲ್ಲೆಯ ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಪಿಕೆಪಿಎಸ್ ಸೊಸೈಟಿ ಮಾಜಿ ಅಧ್ಯಕ್ಷರು, ಲ್ಯಾಂಡ್ ಟ್ರೂಬುನಲ್ ಗೋಕಾಕ ಹಾಲಿ ಸದಸ್ಯರು ಮತ್ತು ಶ್ರೀಮತಿ ನೀಲಮ್ಮ ವೀರಪ್ಪ ವಿಜಯನಗರ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಚೇರಮನ್ನರು  ಆದ  ಮಾರುತಿ ವೀರಪ್ಪ ವಿಜಯನಗರ ಅವರನ್ನು ನೇಮಕ ಮಾಡಿ ನಿನ್ನೆ ನಡೆದ ರಾಜ್ಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಪವಾಡ ಬಯಲು ಪ್ರಖ್ಯಾತಿಯ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ ಅವರು ಅಧಿಕೃತ ಘೋಷಣೆ ಮಾಡಿದರು. ಎಲ್ಲ ಆಡಳಿತ ಮಂಡಳಿಯವರು ಮತ್ತು ಎಲ್ಲ ಜಿಲ್ಲಾಧ್ಯಕ್ಷರು ಸಹಮತ ಸೂಚಿಸಿ ಅಭಿನಂದಿಸಿದರು.

     ಈ ಸಂದರ್ಭದಲ್ಲಿ    ರಾಜ್ಯಾಧ್ಯಕ್ಷರಾದ ಡಾ. ಹುಲಿಕಲ್ ನಟರಾಜ, ನೂತನ ಬೆಳಗಾವಿ ಜಿಲ್ಲಾ ಅಧ್ಯಕ್ಷ  ಮಾರುತಿ ವಿಜಯನಗರ, ಬಸವರಾಜ ಹಟ್ಟಿಗೌಡರ, ಪ್ರೊ. ನಾಗರತ್ನ ಖನ್ನೆ ನಾಯ್ಕರ,  ಸಂಗಮೇಶ ಹಚಡದ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆಯುವ ರಾಜ್ಯ ವೈಜ್ಞಾನಿಕ ಸಮ್ಮೇಳನ ಯಶಸ್ವಿಗೆ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್, ಮಾನವ ಬಂಧುತ್ವ ವೇದಿಕೆ,ಭಾರತ ಸೇವಾದಳ ಸೇರಿ ಉನ್ನತ ಸಂಚಾಲಕ ಸಮಿತಿ ಮಾಡಿ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಲು  ಸಚಿವರಾದ  ಸತೀಶ ಜಾರಕಿಹೊಳಿ ಅವರು ಸೂಚಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ ಬೆಳಗಾವಿ ವಿಭಾಗದ ನಿರ್ದೇಶಕರಾದ  ಬಸವರಾಜ ಹಟ್ಟಿಗೌಡರ್ (ಕೊಳವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್