LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

​ಮುದ್ದೇಬಿಹಾಳ: ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಹಿರಿಯ ರಾಜಕಾರಣಿ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಎಸ್‌ಸಿ ಘಟಕದ ತಾಲ್ಲೂಕು ಅಧ್ಯಕ್ಷ ಸಂಗಮೇಶ ವಿಜಯಕರ ಆಗ್ರಹಿಸಿದ್ದಾರೆ.
​ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಗೌಡ ಅವರು ಜಾತಿ-ಧರ್ಮಗಳ ಭೇದವಿಲ್ಲದೆ ಸಮಾಜದ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿ ಕೆಲಸ ಮಾಡುತ್ತಿರುವ ಮಹಾನ್ ನಾಯಕರು. ಈ ಹಿಂದೆ ಅವರು ಮೈಸೂರು ಸ್ಯಾಂಡಲ್ ಸೋಪ್ ನಿಗಮದ ಅಧ್ಯಕ್ಷರಾಗಿದ್ದಾಗ, ನಿಗಮವನ್ನು ನಷ್ಟದಿಂದ ಪಾರು ಮಾಡಿ ಅತ್ಯಧಿಕ ಲಾಭ ಗಳಿಸುವಂತೆ ಮಾಡಿದ್ದರು. ಅಂತಹ ಅನುಭವಿ ನಾಯಕರಿಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದರು.
ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶಿಸಿ ಸಿ.ಎಸ್. ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವಿನಂತಿಸಿದರು.
​ಒಂದು ವೇಳೆ ತಮ್ಮ ನ್ಯಾಯಯುತ ಬೇಡಿಕೆಯನ್ನು ಪಕ್ಷದ ಹೈಕಮಾಂಡ್ ನಿರ್ಲಕ್ಷಿಸಿದಲ್ಲಿ, ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಾಮೂಹಿಕವಾಗಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲು ಸಿದ್ಧರಿದ್ದೇವೆ ಎಂದು ಎಚ್ಚರಿಸಿದರು.
​ಸುದ್ದಿಗೋಷ್ಠಿಯಲ್ಲಿ ವಿರೇಶ ಭಜಂತ್ರಿ, ಪಂಚ ಗ್ಯಾರಂಟಿ ಸಮಿತಿ ಸದಸ್ಯ ಸಂಗಮೇಶ ಚಲವಾದಿ, ಮುಖಂಡರಾದ ಮುತ್ತಣ್ಣ ಒಡ್ಡೊವಡಗಿ, ಶರಣಪ್ಪ ಚಲವಾದಿ, ಬಸವರಾಜ ಗೋನಾಳ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ