LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

 ಧಾರವಾಡ ಡಿಸಿ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಧಾರವಾಡ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ನಡೆಸಿದರು.
ಜಿಲ್ಲೆಯಲ್ಲಿರುವ ಶಿಕ್ಷಕಿಯರ ಗೌರವ ಧನ ಹೆಚ್ಚಳ, ಅಂಗನವಾಡಿ ಬಾಕಿ ಇರುವ ಬಾಡಿಗೆ ಹಣ ಬಿಡುಗಡೆ ಮಾಡುವುದು, ಅಂಗನವಾಡಿಗಳಲ್ಲಿ ಖಾಲಿ ಇರುವ ಶಿಕ್ಷಕಿ ಮತ್ತು ಸಹಾಯಕಿಯರನ್ನು ನೇಮಕಾತಿ ಮಾಡಿಕೊಳ್ಳುವುದು, ಅನಾರೋಗ್ಯದಿಂದ ಬಳಲುತ್ತಿರುವ ಅಂಗನವಾಡಿ ಶಿಕ್ಷಕಿಯರನ್ನು ಬಿಎಲ್‌ಓ ಕೆಲಸದಿಂದ ಕೈ ಬಿಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು, ಪ್ರತಿವರ್ಷ ಅಂಗನವಾಡಿ ಕೇಂದ್ರಗಳಿಗೆ 6-8 ಸಿಲಿಂಡರ್‌ಗಳನ್ನು ಪೂರೈಕೆ ಮಾಡಬೇಕು, ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಪ್ರಸ್ತುತ ನೀಡುತ್ತಿರುವ ಗೌರವ ಧನವನ್ನು ಪ್ರತಿ ತಿಂಗಳು 1ನೇ ತಾರೀಖಿಗೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್