Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ

ಬಳ್ಳಾರಿ, ಮೇ 30: ಕಾರ್ಮಿಕರಿಗೆ ಕನಿಷ್ಠ ₹36 ಸಾವಿರ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಸಿಐಟಿಯು (CITU) ಬಳ್ಳಾರಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಇಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಗಾಂಧಿ ಭವನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿಯವರೆಗೆ ತಲುಪಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಅಧ್ಯಕ್ಷ ಎಚ್. ತಿಪ್ಪಯ್ಯ, ರಾಜ್ಯ ಸರ್ಕಾರವು ಕಾರ್ಮಿಕರ ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ಜಾರಿಗೆ ತರಬೇಕು. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಕಾರ್ಮಿಕರ ಜೀವನ ನಿರ್ವಹಣೆ ದುಸ್ತರವಾಗಿದೆ. ಆದ್ದರಿಂದ ಕನಿಷ್ಠ ₹36 ಸಾವಿರ ವೇತನ ನಿಗದಿಪಡಿಸಿ ಎಲ್ಲಾ ವರ್ಗದ ಕಾರ್ಮಿಕರಿಗೆ ಅನ್ವಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ. ಮಲ್ಲಮ್ಮ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸುವ ಅಪಾಯವಿದ್ದು, ಕಾರ್ಮಿಕರ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ಅಗತ್ಯ ತಿದ್ದುಪಡಿಗಳೊಂದಿಗೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಖಜಾಂಚಿ ಬಿ. ಉಮಾ ಮಾತನಾಡಿ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಎಲ್ಲಾ ಖಾಯಂ ಹಾಗೂ ಖಾಯಂಯೇತರ ಕಾರ್ಮಿಕರಿಗೆ ಸಮರ್ಪಕ ವೇತನ, ಸಾಮಾಜಿಕ ಭದ್ರತೆ ಹಾಗೂ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರು ಹಾಗೂ ವಿವಿಧ ವಲಯಗಳ ಕಾರ್ಮಿಕರು ಭಾಗವಹಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*