LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗದಗ, ಆಯೋಜಿಸಿದ್ದ ಮಾಧ್ಯಮ ಕ್ರಿಕೆಟ್ ಲೀಗ್ 

ಗದಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಗದಗ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಮಾಧ್ಯಮ ಕ್ರಿಕೆಟ್ ಲೀಗ್  ಆಯೋಜನೆ ಮಾಡಲಾಗಿದ್ದು, ಗುರುವಾರ ನಗರದ ಪತ್ರಿಕಾ ಭವನದಲ್ಲಿ ರೂರಲ್ ಕಿಂಗ್ಸ್ ತಂಡದ ಲೋಗೋ, ಪ್ರೋಮೋ ಹಾಗೂ ಜರ್ಸಿ ಅನಾವರಣ ಮಾಡಲಾಯಿತು.
ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಅಬ್ಬಿಗೇರಿ, ಪತ್ರಕರ್ತರು ಸದಾ ಒತ್ತಡದಿಂದ ಕಾರ್ಯಪ್ರವೃತ್ತರಾಗಿರುತ್ತಾರೆ. ಒತ್ತಡಗಳನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಮಾಧ್ಯಮ ಕ್ರಿಕೆಟ್ ಲೀಗ್ ಆಯೋಜನೆ ಮಾಡಿದ್ದು ಸಂತಸ ತಂದಿದೆ. ಈ ಎಲ್ಲಾ ಪಂದ್ಯಾವಳಿಗಳು ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು. ಹಾಗೂ ಆಟಗಾರರಿಗೆ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಹಿರಿಯ ವರದಿಗಾರ ಹಾಗೂ ವಿನ್ನರ್ಸ್ ತಂಡದ ಮಾಲಕರಾದ ಅನಂತ ಕಾರ್ಕಳ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡದಿಂದ ಹೊರಗೆ ಬರಲು ಸಾಧ್ಯವಾಗುತ್ತದೆ. ಜೊತೆಗೆ ಸದೃಢ ಆರೋಗ್ಯಕ್ಕಾಗಿ ಕ್ರೀಡೆಗಳ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಮಾಧ್ಯಮ ಕ್ರಿಕೆಟ್ ಲೀಗ್ ಆಯೋಜಿಸಿದ್ದು ಉತ್ತಮ ಬೆಳವಣಿಗೆ. ಜಿಲ್ಲೆಯಾಧ್ಯಂತ ಇರುವ ಮಾಧ್ಯಮ ಮಿತ್ರರು ಒಂದೇ ವೇದಿಕೆಯಲ್ಲಿ ಆಡುತ್ತಿರುವುದರಿಂದ ಬಾಂಧವ್ಯಗಳು ಮತ್ತಷ್ಟು ವೃದ್ಧಿಯಾಗುತ್ತವೆ ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿ, ಪತ್ರಿಕಾ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಪ್ರಸಕ್ತ ವರ್ಷ ಆಯೋಜಿಸಿದ್ದು ಉತ್ತಮ ಬೆಳವಣಿಗೆಯಾಗಿದೆ. ತಾಲೂಕ ಮಟ್ಟದಲ್ಲಿ ಪತ್ರಕರ್ತರು ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಮುಂದುವರೆದ ಭಾಗವಾಗಿ ಜಿಲ್ಲಾ ಮಟ್ಟದಲ್ಲಿ ಗದಗ ನಗರದಲ್ಲಿ ಮೊದಲ ಬಾರಿಗೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು, ಎಲ್ಲ ತಂಡದ ಆಟಗಾರರು ಸ್ಪರ್ಧಾತ್ಮಕವಾಗಿ ಭಾಗವಹಿಸಿ ಮಾದರಿ ಆಟಗಾರರು ಆಗಬೇಕು ಎಂದು ಕಿವಿಮಾತು ಹೇಳಿದರು.
ಕ್ರಿಕೆಟ್ ಲೀಗ್ ನಂತಹ ಕಾರ್ಯಕ್ರಮಗಳಿಂದ ಮಾಧ್ಯಮ ಮಿತ್ರರೆಲ್ಲರೂ ಒಂದು ಕಡೆ ಸೇರಲು ಅವಕಾಶ ಸಿಕ್ಕಂತಾಗಿದೆ. ಪ್ರತಿನಿತ್ಯ ಒತ್ತಡದ ನಡುವೆ ಇಂತಹ ವಿನೂತನ ಕಾರ್ಯಕ್ರಮಗಳು ನಡೆಯುತ್ತಿವೆ. ಮುಂಬರುವ ದಿನಗಳಲ್ಲಿ ಇಂತಹ ಹಲವಾರು ಕಾರ್ಯಕ್ರಮಗಳು ನಡೆಯಲಿ. ಸಂಘದ ಕಾರ್ಯಕ್ರಮಗಳಿಗೆ ನಮ್ಮ ಸಹಕಾರ ಇದ್ದೇ ಇರುತ್ತದೆ.
ಜಗದೀಶ್ ಎಸ್.ಪಿ
   ಸಂಪಾದಕರು, ರತ್ನಾಕರವಾಣಿ ಕನ್ನಡ ದಿನಪತ್ರಿಕೆ, ರೂರಲ್ ಕಿಂಗ್ಸ್ ಮಾಲಕರು
ಕಾರ್ಯಕ್ರಮದ ನಿರೂಪಣೆಯನ್ನು ನೈಟ್ ರೈಡರ್ಸ್ ತಂಡದ ಮಾಲಕರಾದ ಆನಂದಯ್ಯ ವೀರಕ್ತಮಠ ಮಾಡಿದರು. ಈ ವೇಳೆ ಎಚ್.ಎಮ್ ಶರೀಫನವರ, ದೇವಪ್ಪ ಲಿಂಗದಾಳ, ಸುನೀಲ ತೆಂಬದಮನಿ, ರವಿಕಾಂತ ಅಂಗಡಿ, ಟಿ. ಎನ್ ಭಾಂಡಗೆ, ಶರಣು ದೊಡ್ಡೂರ, ಅರಣಕುಮಾರ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್