LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿಯಲ್ಲಿ ಎಐಎಂಐಎಂ ಸಂಘಟನೆ ಬಲಪಡಿಸಲು ಸದಸ್ಯತ್ವ ಅಭಿಯಾನ: ಲತೀಫ್‌ಖಾನ್ ಫಠಾನ್

ಬಳ್ಳಾರಿ, ಜು.21: ರಾಜ್ಯದಲ್ಲಿ ಎಐಎಂಐಎಂ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೂತ್ ಮಟ್ಟದ ಸದಸ್ಯತ್ವ ಅಭಿಯಾನ ಹಾಗೂ ಸಂಘಟನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಲತೀಫ್‌ಖಾನ್ ಫಠಾನ್ ತಿಳಿಸಿದರು.
ನಗರದ ಅತಿಥಿ ಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
2012ರಿಂದ ಕರ್ನಾಟಕದಲ್ಲಿ ಎಐಎಂಐಎಂ ಪಕ್ಷ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದೀಗ ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಗ್ರಾಮ ಮಟ್ಟದವರೆಗೆ ಪಕ್ಷವನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಸಂಘಟನೆಯ ಬೆಳವಣಿಗೆ, ಸದಸ್ಯತ್ವ ವೃದ್ಧಿ ಹಾಗೂ ಸ್ಥಳೀಯ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸುವ ಕುರಿತು ಚರ್ಚಿಸಲಾಗಿದೆ. ಪ್ರತಿಯೊಂದು ಬೂತ್‌ನಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲೇ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಐಎಂಐಎಂ ಮುಖಂಡರಾದ ನಜೀರ್ ಹುನಯಲ್, ದಾದಾಪೀರ್ ಬೆಟ್ಟಗೇರಿ, ಮೊಹಮ್ಮದ್ ಶಾರುಖ್ ಪಾಟೀಲ್, ಶಫಾಕತ್ ಬಡಗೇರಿ, ಝಾಕೀರ್ ಹಾಗೂ ದಾದಾ ಸಲ್ಮಾನ್, ದಾದಾ ಪೀರ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್