LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ಬಿಜೆಪಿಯಿಂದ ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮಪ್ರಸಾದ ಮುಖರ್ಜಿ ಸ್ಮರಣೆ*

ಬೆಳಗಾವಿ.ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಇಂದು  ಬೆಳಗಾವಿ ನಗರದ ಬಿಜೆಪಿ ಕಾರ್ಯಾಲಯದಲ್ಲಿ  ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ  ಪುಷ್ಪ ನಮನ ಸಲ್ಲಿಸಿ ಸಂಸದ‌ ಜಗದೀಶ ಶೆಟ್ಟರ್ ಮಾತನಾಡಿ 
ಒಂದೇ ದೇಶದಲ್ಲಿ 'ಎರಡು ಪ್ರಧಾನ, ಎರಡು ಸಂವಿಧಾನ ಮತ್ತು ಎರಡು ಧ್ವಜ' ಇರಲು ಸಾಧ್ಯವಿಲ್ಲ ಎಂದು ಕಾಶ್ಮೀರದ ಸಂಪೂರ್ಣ ವಿಲೀನಕ್ಕಾಗಿ ಅವರು ನಡೆಸಿದ ಹೋರಾಟ ಮತ್ತು ಬಲಿದಾನ ಇತಿಹಾಸದಲ್ಲಿ ಸದಾ ಅಮರ. ಅವರ ರಾಷ್ಟ್ರೀಯತಾವಾದದ ಆದರ್ಶಗಳು ಹಾಗೂ ದೇಶಪ್ರೇಮದ ತತ್ತ್ವಗಳು ನಮಗೆಲ್ಲರಿಗೂ ಸದಾ ದಾರಿದೀಪವಾಗಿವೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಕಾಶ್ಮೀರಕ್ಕೆ 370ನೇ ವಿದಿಯ ಮೂಲಕ ನೀಡಿದ್ದ ಪ್ರತ್ಯೇಕ ಸ್ಥಾನಮಾನವನ್ನ ರದ್ದು ಗೊಳಿಸಲು ಹೋರಾಡಿ ನಿಗೂಢವಾಗಿ ಶರೀರ ತ್ಯಜಿಸಿದ ಮಹಾನ ಚೇತನ ನಮ್ಮನ್ನು ಅಗಲಿ ಇಂದಿಗೆ 73 ವರ್ಷಗಳು ಗತಿಸಿವೆ ಆದರೆ ಅವರ ಮಹಾನ್ ಕಾರ್ಯ ಹಾಗೂ ಸಮಾಜದಲ್ಲಿ ಸಲ್ಲಿಸಿದ ನಿಸ್ವಾರ್ಥ ಸೇವೆ ಇಂದಿಗೂ ಭಾರತೀಯರ ಮನದಲ್ಲಿ ಅಚ್ಚಳಿಯದೆ ಉಳಿದಿವೆ ಎಂದು ಸ್ಮರಿಸಿದರು. 
       ಈ ಸಂದರ್ಭದಲ್ಲಿಮಾಜಿ ಶಾಸಕರಾದ ಸಂಜಯ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ,ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಪ್ರಕೋಷ್ಠಗಳ ಸಂಯೋಜಕ ಮಹೇಶ ಮೋಹಿತೆ,ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ ಕೋಲಕಾರ ಮುಖಂಡರಾದ ಮಂಜುನಾಥ ಪಮ್ಮಾರ, ಚೇತನ ಅಂಗಡಿ, ಸಾಮಾಜಿಕ ಜಾಲತಾಣ ಸಹ ಸಂಚಾಲಕ ಮನೋಜ ಪಾಟೀಲ, ವೀರಭದ್ರ ಪೂಜಾರಿ, ಶ್ವೇತಾ ಜಗದಾಳೆ, ಪ್ರವೀಣ ಮಾಳೇದವರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ