LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಹೈಕೋರ್ಟ್​ನಲ್ಲಿ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ

ಸಿಕ್ಕಿಂ,30:ಇನ್ಮುಂದೆ ಹೈಕೋರ್ಟ್​ನಲ್ಲಿ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ಸಿಗಲಿದೆ. ಸಿಕ್ಕಿಂ ಹೈಕೋರ್ಟ್​ ಈ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಹೈಕೋರ್ಟ್​ನ ಮಹಿಳಾ ಉದ್ಯೋಗಿಗಳು ತಿಂಗಳಲ್ಲಿ 2-3 ದಿನ ಮುಟ್ಟಿನ ರಜೆ ಪಡೆಯಬಹುದು ಎಂದು ಹೇಳಲಾಗಿದ್ದು, ಇದರಿಂದ ಮಹಿಳಾ ಸಿಬ್ಬಂದಿ ಸಂತಸಪಟ್ಟಿದ್ದಾರೆ.

ಆದರೆ ಈ ರಜೆಯನ್ನು ಹೈಕೋರ್ಟ್​ನ ವೈದ್ಯಾಧಿಕಾರಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತದೆ. ಇದನ್ನು ಒಟ್ಟಾರೆ ರಜೆ ಜತೆಗೆ ಪರಿಗಣಿಸಲಾಗುವುದಿಲ್ಲ.

ಸಿಕ್ಕಿಂ ಹೈಕೋರ್ಟ್​ ದೇಶದ ಅತ್ಯಂತ ಚಿಕ್ಕ ಹೈಕೋರ್ಟ್​ ಆಗಿದ್ದು ದೊಡ್ಡ ನಿರ್ಧಾರವನ್ನೇ ಕೈಕೊಂಡಿದೆ. ಇದರಲ್ಲಿ ಮೂವರು ನ್ಯಾಯಮೂರ್ತಿಗಳು ಇದ್ದಾರೆ, ಒಬ್ಬರು ಮಹಿಳಾ ಅಧಿಕಾರಿ ಸೇರಿದಂತೆ ಕೇವಲ 9 ಮಂದಿ ಇದ್ದಾರೆ.

ಸಿಕ್ಕಿಂ ಹೈಕೋರ್ಟ್ ಮುಟ್ಟಿನ ರಜೆ ನೀತಿಯನ್ನು ಪರಿಚಯಿಸಿದ ಮೊದಲ ಹೈಕೋರ್ಟ್ ಆಗಿದೆ. ಪ್ರಸ್ತುತ, ಮುಟ್ಟಿನ ರಜೆಗೆ ಯಾವುದೇ ರಾಷ್ಟ್ರೀಯ ನೀತಿ ಅಥವಾ ಕಾನೂನು ಇಲ್ಲ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST