LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೈಕ್ರೋಕಂಟ್ರೇಲರ್ ಮಿನಿ ವ್ರಾಜೆಕ್ಟ್ ಪ್ರದರ್ಶನ 

ಬಳ್ಳಾರಿ,ಜೂ.12:ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿAಗ್ ಕಾಲೇಜಿನ ಕಂಪ್ಯೂಟರ್ ಸೈನ್ ಮತ್ತು ಎಂಜಿನಿಯರಿAಗ್ ವಿಭಾಗದ ವತಿಯಿಂದ   ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಮೈಕ್ರೋಕಂಟ್ರೋಲರ್ ಆಧಾರಿತ ಮಿನಿ ವ್ರಾಜೆಕ್ಟ್ ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮೈಕ್ರೋಕಂಟ್ರೋಲರ್ ತಂತ್ರಜ್ಞಾನವನ್ನು ಬಳಸಿಕೊಂಡು ವಿನೂತನ ಹಾಗೂ ಪ್ರಾಯೋಗಿಕ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ, ಸ್ವಜನಶೀಲತೆ ಹಾಗೂ ಸಮಸ್ಯೆ ಪರಿಹಾರ ಕೌಶಲ್ಯಗಳನ್ನು ವೃದ್ಧಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ತೀರ್ಪುಗಾರರಾಗಿ ಎಂ.ಟೆಕ್ ಸಂಯೋಜಕರಾದ ಡಾ. ಸ್ವಪ್ನ ಕುಲಕರ್ಣಿ ಹಾಗೂ ಡಾ. ಪಂಪಾಪತಿ ಅವರು ಭಾಗವಹಿಸಿ ವಿದ್ಯಾರ್ಥಿಗಳ ಪ್ರಾಜೆಕ್ಟ್ಗಳನ್ನು ಮೌಲ್ಯಮಾಪನ ಮಾಡಿದರು. ಅವರು ವಿದ್ಯಾರ್ಥಿಗಳ ಪ್ರಾಜೆಕ್ಟ್ಗಳಲ್ಲಿನ ಹೊಸತನ ಮತ್ತು ತಾಂತ್ರಿಕ ಅಂಶಗಳನ್ನು ಪ್ರಶಂಸಿಸಿ, ಭವಿಷ್ಯದಲ್ಲಿ ಇನ್ನಷ್ಟು ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಮಹಾಬಲೇಶ್ವರಪ್ಪ ಅವರು ವಿದ್ಯಾ ರ್ಥಿಗಳಿಗೆ ಶುಭ ಹಾರೈಸಿ, ಇಂತಹ ಕಾರ್ಯಕ್ರಮಗಳು ವಿದ್ಯಾ ರ್ಥಿಗಳಲ್ಲಿ ತಾಂತ್ರಿಕ ಕೌಶಲ್ಯ ಮತ್ತದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು.
ವಿಭಾಗದ ಮುಖ್ಯಸ್ಥರಾದ ಡಾ||ಗಿರೀಶ ಎಚ್. ಅವರು ವಿದ್ಯಾರ್ಥಿಗಳ ಶ್ರಮವನ್ನು ಶ್ಲಾಘಿಸಿ, ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಕಲಿಕೆ ಮತ್ತು ನವೀನತೆಯ ಮಹತ್ವವನ್ನು ಒತ್ತಿಹೇಳಿದರು.
ಕಾರ್ಯಕ್ರಮದ ಸಂಚಾಲಕ ಸುನಿತಾ ಎಸ್. ಅವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿ, ವಿದ್ಯಾ ರ್ಥಿಗಳು ಹಾಗೂ ಸಿಬ್ಬಂದಿಯ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಆದ್ದಾ ಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸದಸ್ಯರು ಭಾಗವಹಿಸಿ ಪ್ರದರ್ಶಿಸಲಾದ ಪ್ರಾಜೆಕ್ಟ್ಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್