ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ಸಂಜೆ ಚಳಿ ಹೆಚ್ಚಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಂಜಿನಿಂದ ಕೂಡಿದ ವಾತಾವರಣ ಇದೆ. ಬೆಳ್ಳಂ ಬೆಳಗ್ಗೆ ಜನರು ಯಾವುದೇ ಕೆಲಸ-ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಜನರು ಮನೆಯಿಂದ ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಹಲವು ದಿನಗಳವರೆಗೂ ಇದೇ ವಾತಾವರಣ ಇರಲಿದ್ದು, ಮಂಜಿನಿಂದ ಕೂಡಿದ ವಾತಾವರಣ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ (ಜ.07) ತಾರೀಕಿನವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಶನಿವಾರ (ಜ.04)ರವರೆಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ರವಿವಾರದವರೆಗೆ (ಜ.5) ಮಂಜು ಅಥವಾ ದಟ್ಟ ಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.