LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಳಿಂಗ ಸರ್ಪ ಸಂರಕ್ಷಣೆಗೆ ಸಚಿವ ಖಂಡ್ರೆ ಸೂಚನೆ

ಚಿಕ್ಕಮಗಳೂರು, ನವೆಂಬರ್ 24: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲು ವಿಶೇಷ ತಂಡವನ್ನು ರಚಿಸುವಂತೆ ಸೂಚನೆ ನೀಡಿದ್ದಾರೆ. ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು, ಕಾಡಿಗೆ ಬಿಡಲು ಯಾವುದೇ ಖಾಸಗಿ ಸಂಸ್ಥೆಗಳ ಮೊರೆ ಹೋಗದೆ ಅರಣ್ಯ ಇಲಾಖೆಯ ವಿಭಾಗದ 5 ಸಿಬ್ಬಂದಿಗೆ ತರಬೇತಿ ನೀಡುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.



ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ‌ಸರ್ಪಗಳು ಹೆಚ್ಚಾಗಿ ಕಂಡು ಬರುತ್ತಿವೆ. ಜನವಸತಿ ‌ಪ್ರದೇಶ ಸೇರಿದಂತೆ ಮನೆಯೊಳಗೆ, ತೋಟಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗನಿಂದ ಸಾರ್ವಜನಿಕರಲ್ಲಿ ಭಯ ಮೂಡುತ್ತಿದೆ. ಇದಕ್ಕೆ ಪರಿಹಾರವಾಗಿ ಉರಗ ತಜ್ಞರು ಮತ್ತು ಖಾಸಗಿ ಸಂಸ್ಥೆಗಳನ್ನು ಸಂಪರ್ಕಿಸುವ ಅಗತ್ಯವಿಲ್ಲವೆಂದು ಹೇಳಿರುವ ಈಶ್ವರ್ ಖಂಡ್ರೆ, ಕಾಳಿಂಗ ಸರ್ಪವನ್ನು ಹಿಡಿಯಲು ಮತ್ತು ಸುರಕ್ಷಿತವಾಗಿ ಕಾಡಿಗೆ ಬಿಡಲು ನಮ್ಮದೇ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡಬೇಕು. ಒಬ್ಬ ಪ್ರಾದೇಶಿಕ ಅರಣ್ಯಾಧಿಕಾರಿಯೊಂದಿಗೆ ತರಬೇತಿ ಪಡೆತ 5 ಜನರ ತಂಡವನ್ನು ನೇಮಿಸಬೇಕು. ಈಗಾಗಲೆ ರಚಿಸಿರುವ ETF(Elephant task Force) ಮತ್ತು LTF (Leopard Task Force) ನಂತೆಯೇ ಕಾಳಿಂಗ ಸರ್ಪವನ್ನು ಹಿಡಿಯಲೂ ಒಂದು ತಂಡ ರಚಿಸುವುದರಿಂದ ಸರ್ಪಗಳ ಸೆರೆ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ವನ್ನೂ ತಪ್ಪಿಸಬಹುದಾಗಿದೆ ಎಂದು ಹೇಳೀದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್