LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿಗರಿಂದ ಕೋಮು ಸೌಹಾರ್ದ ಕದಡುವ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ‌ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.


ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,  ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು‌.


ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ  ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.


ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಿರುವುದಕ್ಕೆ ವಿಪಕ್ಷಗಳು ಖಂಡಿಸಿರುವ ವಿಚಾರಕ್ಕೆ‌ ಪ್ರತಿಕ್ರಿಯಿಸಿದ ಸಚಿವರು, ಅವರು ದ್ವೇಷಪೂರಿತ ಭಾಷಣ ಮಾಡಿದರೆ ಕ್ರಮ ಕೈಗೊಳ್ಳಲು ವಿಧಾನಸಭೆಯಲ್ಲಿ ಶಾಸನ ತರಲಾಗಿದೆ. ದ್ವೇಷ ಪೂರಿತ ಭಾಷಣವನ್ನು ‌ಬಿಜೆಪಿ- ಕಾಂಗ್ರೆಸ್ ನಾಯಕರು ಯಾರೇ ಆಗಲಿ ಕ್ರಮ ಕೈಗೊಳ್ಳಲಾಗುತ್ತದೆ. ನಾಳೆ ಕಾಂಗ್ರೆಸ್ಸಿಗರು ಮಾತನಾಡಿದರು ಕ್ರಮ ಆಗುತ್ತದೆ. ಕಾನೂನು ಎಲ್ಲರಿಗೂ ಒಂದೇ ಅಲ್ವಾ!? ಶಾಂತಿಯನ್ನು ಕದಡುವ ಕೆಲಸ ಮಾಡಿದರೆ ಖಂಡಿತ ಎಫ್ ಐ ಆರ್ ಆಗುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ನಾನು‌ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ, ಧರ್ಮಸ್ಥಳ ನಮ್ಮೆಲ್ಲರ ಆರಾಧ್ಯ ಸ್ಥಳ, ಬಹಳಷ್ಟು ಭಕ್ತಿಯಿಂದ ನಡೆದುಕೊಳ್ಳುವ ಸ್ಥಳ. ಏನೆಲ್ಲಾ ಷಡ್ಯಂತ್ರ ಆಗಿದೆ, ಇದೆಲ್ಲಾ ಹೊರ ಬರುತ್ತೆ ಸ್ವಲ್ಪ ಕಾಯಿರಿ. ಎಸ್ಐಟಿ ತನ್ನ ಕೆಲಸ ಮಾಡುತ್ತಿದೆ. ಇದನ್ನು ಸಾರ್ವಜನಿಕವಾಗಿ ಹೇಳಲು ಬರಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್