LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

* *ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ*





 *ವಿಧಾನಸೌಧ, ಬೆಂಗಳೂರು:* ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ  ಕಾಣೆಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯವಾಡಿದ್ದಾರೆ.


ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ ಹೋರಾಟ ಮಾಡುತ್ತಿದ್ದರು. ಯಾಕೆ ಈಗ ಮಾತಾಡುತ್ತಿಲ್ಲ, ಎಲ್ಲಿ ಕಾಣೆಯಾಗಿದ್ದಾರೆ ಎಂದು ಪ್ರಶ್ನಿಸಿದರು.


ಈಗ ಯುದ್ಧ ನಡೆಯುತ್ತಿದ್ದು, ಇದರಿಂದ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆ ಏರಿಕೆಯಾಗುತ್ತಿದೆ. ಈಗಷ್ಟೇ ಸಂಕಷ್ಟ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗ್ರಾಹಕರ ಹಾಗೂ ಹೋಟೆಲ್‌ ನವರ ಹಿತದೃಷ್ಟಿಯನ್ನು ಕಾಪಾಡಬೇಕು ಎಂದು ಸಚಿವರು ಹೇಳಿದರು.


* *ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷ*


ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ. ಇಂದಿನ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಲಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.


ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಡಿ.ಕೆ.ಶಿವಕುಮಾರ್‌ ಅವರ ಕನಸಾಗಿತ್ತು. ಅವರ ಕನಸು ನನಸಾಗಿದೆ. ಮುಂದಿನದ್ದು ಏನೇ ಇದ್ದರೂ ಹೈಕಮಾಂಡ್‌ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್