LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಂಗನವಾಡಿ ನೇಮಕಾತಿಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್




ವಿಧಾನಸೌಧ: ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಪಾರದರ್ಶಕವಾಗಿ ಆಯ್ಕೆ ನಡೆದಿದೆ. ಆಯ್ಕೆಯಲ್ಲಿ ಯಾವುದೇ ಹಸ್ತಕ್ಷೇಪ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು.


ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ  ಉತ್ತರಿಸಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ 52 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಈ ಪೈಕಿ 51 ಮಂದಿಗೆ ಆದೇಶ ಪತ್ರ ನೀಡಲಾಗಿದೆ. ಓರ್ವ ಅಭ್ಯರ್ಥಿ ವಿದ್ಯಾ ಗೋವಿಂದ್ ಪೂಜಾರಿ ಅವರ ಆಯ್ಕೆಗೆ ಆಕ್ಷೇಪಣೆ ಬಂದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ತಡೆಹಿಡಿಯಲಾಗಿತ್ತು. ಇದೀಗ ಅವರಿಗೂ ಆದೇಶ ಪತ್ರ ನೀಡಲಾಗಿದೆ ಎಂದು ಉತ್ತರಿಸಿದರು.


ಎಲ್ಲರಿಗೂ ನ್ಯಾಯ ಒದಗಿಸಿಕೊಡುವುದೇ ನಮ್ಮ ಸರ್ಕಾರದ ಉದ್ದೇಶ, ಶಿಕ್ಷಕರ ಆಯ್ಕೆಯಲ್ಲಿ ಯಾವುದೇ ಹಸ್ತಕ್ಷೇಪ ನಡೆದಿಲ್ಲ. ಯಾವುದೇ ಒತ್ತಡಕ್ಕೂ ಮಣಿದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಗುಡ್ಡಗಾಡು ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು (ಮಡಿಕೇರಿ) ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಾಸಸ್ಥಳದಿಂದ ಅಂಗನವಾಡಿ ಕೇಂದ್ರಕ್ಕೆ ಇರುವ ಅಂತರವನ್ನು 3 ಕಿಲೋಮೀಟರ್‌ನಿಂದ 5 ಕಿಲೋಮೀಟರ್‌ವರೆಗೆ ವಿಸ್ತರಿಸಲಾಗಿದೆ ಎಂದು ಸಚಿವರು ಉತ್ತರಿಸಿದರು.


ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವಾವಧಿಯಲ್ಲಿ 2 ಸ್ಥಾನಪಲ್ಲಟಗಳಿಗೆ ಅವಕಾಶವಿರುವುದನ್ನು ಮಾರ್ಪಾಡು ಮಾಡಿ ತುರ್ತು ಸಂದರ್ಭಗಳಲ್ಲಿ 3ನೇ ಸ್ಥಾನಪಲ್ಲಟ್ಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್