LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಾಲ್ಯವಿವಾಹ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್




ಬೆಂಗಳೂರು: ಬಾಲ್ಯ ವಿವಾಹವನ್ನು ತಡೆಗಟ್ಟಲು ಪಾಲಕರ ಸಹಕಾರ ಅತ್ಯಗತ್ಯ. ಎಲ್ಲರೂ ಸಹಕರಿಸಿದರೆ  ಬಾಲ್ಯವಿವಾಹ ತಡೆಗಟ್ಟಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.


ಬೆಂಗಳೂರಿನ ಗೃಹ ಕಚೇರಿಯಲ್ಲಿ ವಿಜಯನಗರ ಜಿಲ್ಲೆ ಭೀಮಾ ಸಂಘ, ಕಿಶೋರಿಯರ ಸಂಘ, ಯುವ ಧ್ವನಿ ಒಳಗೊಂಡ The Concerned for  Working Children ಎನ್ನುವ ಸ್ವಯಂ ಸೇವಾ ಸಂಸ್ಥೆಯ ಸದಸ್ಯರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.


ಬಾಲ್ಯವಿವಾಹ ತಡೆಯುವುದು ಕೇವಲ ನಮ್ಮ ಇಲಾಖೆಯ ಕೆಲಸವಲ್ಲ. ಹಲವು ಇಲಾಖೆಗಳ ವ್ಯಾಪ್ತಿಗೆ ಬರುತ್ತದೆ. ಬಾಲ್ಯವಿವಾಹಕ್ಕೆ ಮನೆಯ ಆರ್ಥಿಕ ಪರಿಸ್ಥಿತಿ, ಪ್ರೇಮ ವಿವಾಹ, ಸಿನಿಮಾ ಎಫೆಕ್ಟ್ ಕೂಡ  ಕಾರಣವಾಗುತ್ತದೆ. ಎಲ್ಲರೂ ಸೇರಿ ಬಾಲ್ಯ ವಿವಾಹ ತಡೆಯಲು ಪ್ರಯತ್ನಿಸೋಣ ಎಂದರು.


ಹದಿಹರೆಯದ ಮಕ್ಕಳ ಹಾಗೂ ಯುವಜನರಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಪೌಷ್ಟಿಕಾಂಶದ ಆಹಾರ ಪದಾರ್ಥಗಳ ವಿತರಣೆ ಹಾಗೂ ಶುಚಿ ಪ್ಯಾಡ್ ಗಳ ವಿತರಣೆ, ಮಕ್ಕಳಿಗೆ ಶಿಕ್ಷಣ ಅಥವಾ ಉದ್ಯೋಗಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ವೇಳೆ ತಂದೆ ಹೆಸರನ್ನು ಕಡ್ಡಾಯವಾಗಿ ನಮೂದಿಸಬೇಕಾಗಿರುವುದು, ಮದ್ಯ ಮಾರಾಟ, ವಿಕಲ ಚೇತನ ಮಕ್ಕಳಿಗೆ ಅಗತ್ಯ ಸೌಲಭ್ಯಗಳ ಕೊರತೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಎನ್ ಜಿಒ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.


ಈ ವೇಳೆ ಸಹ ನಿರ್ದೇಶಕರಾದ ಕೃಪಾ ಎಂ.ಎಂ, ಕಾರ್ಯಕಾರಿ ನಿರ್ದೇಶಕರಾದ ಕವಿತಾ ರತ್ನ, ಸಂಯೋಜಕರಾದ ದೀಪ್ತಿ ಹಾಗೂ ವಿಜಯನಗರದ ಸ್ನೇಹ ಫೌಂಡೇಶನ್, ಸಖಿ ಟ್ರಸ್ಟ್ ಕಾರ್ಯಕರ್ತರು, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕರಾದ ಅಕ್ಕಮಹಾದೇವಿ ಉಪಸ್ಥಿತರಿದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್