LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶ : ಸಚಿವ ಎಂ.ಬಿ. ಪಾಟೀಲ್


ಬೆಂಗಳೂರು: ''ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳು ಎರಡು ವಿಮಾನ ನಿಲ್ದಾಣಗಳನ್ನು ಹೊಂದಿರುವಂತೆ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದೆ. ಆದರೆ, ಸ್ಥಳವನ್ನು ಅಂತಿಮಗೊಳಿಸಿಲ್ಲ. ರಾಜ್ಯ ಮತ್ತು ಬೆಂಗಳೂರಿನ ಹಿತಾಸಕ್ತಿಗೆ ಪೂರಕವಾಗಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತದೆ'' ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.


ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬೆಂಗಳೂರು ಹೊರತಾಗಿ ಬೇರೆ ಕಡೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಉದ್ದೇಶದ ಬಗ್ಗೆ ಸಚಿವರು ಹೇಳಿದ್ದಾರೆ. ತುಮಕೂರು ಮತ್ತು ಚಿತ್ರದುರ್ಗದ ಮಧ್ಯೆ ನಿರ್ಮಾಣ ಮಾಡುವ ಯೋಜನೆ ಇದೆಯಾ ಎನ್ನುವ ಕುರಿತ ಬಿಜೆಪಿ ಸದಸ್ಯ ನವೀನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ''ಆ ರೀತಿಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಬೆಂಗಳೂರಿಗೆ 2 ನೇ ವಿಮಾನ ನಿಲ್ದಾಣ ಮಾಡುವ ಪ್ಲಾನ್ ಇದೆ. ನಮಗೆ 2033 ರವರೆಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವಕಾಶ ಇದೆ. ಆ ನಂತರ ನಾವು ವಿಮಾನ ನಿಲ್ದಾಣ ಮಾಡಬಹುದು'' ಎಂದರು.




''ಈಗಿನಿಂದಲೇ ಪ್ರಸ್ತಾಪ ಮಾಡುತ್ತಿದ್ದೇವೆ. ಏಳೆಂಟು ಜಾಗ ಗುರುತಿಸಿದ್ದೇವೆ. ಏರ್ ಪೋರ್ಟ್ ಜಾಗ ಮೆರಿಟ್ ಮೇಲೆ ಮಾಡುತ್ತೇವೆ. ಸೂಕ್ತ ಮಾನದಂಡದ ಮೇಲೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಗುರಿ ಇದೆ. ಲಾಜಿಸ್ಟಿಕ್, ಪ್ಯಾಸೆಂಜರ್ ಕನೆಕ್ಟಿವಿಟಿ ನೋಡಿ ಬೆಂಗಳೂರಿಗೆ ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿಯೇ ಮಾಡಲಾಗುತ್ತದೆ. ರಾಜ್ಯದ ಹಿತಾಸಕ್ತಿಗೆ ಪೂರಕವಾಗಿ ಮಾಡಲಾಗುತ್ತದೆ'' ಎಂದು ತಿಳಿಸಿದರು.


''ಚಿತ್ರದುರ್ಗದಲ್ಲಿ ಜಿಲ್ಲಾ ವಿಮಾನ ನಿಲ್ದಾಣ ಮಾಡೋಣ. ಆದರೆ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಅತಿ ಅಗತ್ಯ ಮತ್ತು ಸೂಕ್ತ ಸ್ಥಳವಾಗಿದೆ. ಆದರೆ, ಚಿತ್ರದುರ್ಗಕ್ಕೆ ಕೈಗಾರಿಕೆ ಸ್ಥಾಪಿಸುವ ಪ್ರಯತ್ನ ಮಾಡುತ್ತೇವೆ'' ಎಂದು ಹೇಳಿದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್