LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

'ಶಕ್ತಿ' ಯೋಜನೆ ಜಾರಿಯಾದ ನಂತರ ಆದಾಯ ಹೆಚ್ಚಾಗಿದೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯ ಸರ್ಕಾರದ 'ಶಕ್ತಿ' ಯೋಜನೆ ಜಾರಿಯಾದ ನಂತರ ಆದಾಯ ಹೆಚ್ಚಾಗಿದ್ದು, ಸಾರಿಗೆ ನಿಗಮಗಳು ಲಾಭದತ್ತ ಬರುತ್ತಿವೆ. ಇದೇ ವೇಳೆ, ನಿರ್ವಹಣೆ, ಡೀಸೆಲ್ ​ದರ ಹೆಚ್ಚಳವಾಗಿದೆ. ಆದರೆ ಟಿಕೆಟ್ ದರ ಹೆಚ್ಚಿಸಿಲ್ಲದ ಕಾರಣದಿಂದಾಗಿ ಲಾಭವನ್ನು ತೋರಿಸಲಾಗುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿಗಮಗಳಿಗೆ ಲಾಭವಾಗುತ್ತಿದೆ. ಬಿಎಂಟಿಸಿ 10 ವರ್ಷದಿಂದ ಟಿಕೆಟ್ ದರ ಹೆಚ್ಚಿಸಿಲ್ಲ. 'ಶಕ್ತಿ' ಯೋಜನೆ ಜಾರಿ ನಂತರ ಆದಾಯ ಹೆಚ್ಚಾದರೂ ನಿರ್ವಹಣೆ, ಡೀಸೆಲ್, ವೇತನದ ಕಾರಣಕ್ಕೆ ಲಾಭ ತೋರಿಸಲಾಗುತ್ತಿಲ್ಲ. 2020ರಲ್ಲಿ ಉಳಿದ ಮೂರು ಸಾರಿಗೆ ನಿಗಮಗಳಿಂದ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಇದರ ನಡುವೆ ಡೀಸೆಲ್ ದರ ಹೆಚ್ಚಳವಾಗಿದೆ. ಹಾಗಾಗಿ ಲಾಭ ತೋರಿಸಲಾಗಿಲ್ಲ. ಆದರೂ ಮುಂದಿನ ದಿನಗಳಲ್ಲಿ ಲಾಭಕ್ಕೆ ಸಾರಿಗೆ ನಿಗಮಗಳು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


2024ರ ಜೂನ್​ವರೆಗೆ 'ಶಕ್ತಿ' ಯೋಜನೆಯಡಿ 4,453.50 ಕೋಟಿ ಬಿಡುಗಡೆ ಮಾಡಿದ್ದು 1,413.47 ಕೋಟಿ ಬಾಕಿ ಇದೆ. ಯೋಜನೆಗೆ 5,015 ಕೋಟಿ ಹಣವನ್ನು ಈ ಬಾರಿ ಬಜೆಟ್​ನಲ್ಲಿ ಇಡಲಾಗಿದೆ. ಈ ವರ್ಷ ಸ್ವಲ್ಪ ಕೊರತೆಯಾಗಬಹುದು. ಇದನ್ನು ಸರಿಪಡಿಸಲು ಸಿಎಂ ಗಮನಕ್ಕೆ ತರಲಾಗಿದೆ. ಪೂರಕ ಬಜೆಟ್​ನಲ್ಲಿ ಒದಗಿಸುವ ಭರವಸೆ ಇದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ