LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಗಲಭೆ ಎಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ




ಬೆಂಗಳೂರು: 'ನಮ್ಮ ಸರ್ಕಾರ ಕೋಮು-ಗಲಭೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಯಾರೇ ಕೋಮು ಗಲಭೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.


ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬೆಳಗಾವಿ ನಗರದ ಅಳ್ವಾನ್ ಗಲ್ಲಿಯಲ್ಲಿ ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಬೆಳೆದು ಎರಡು ಕೋಮಿನ ಮಧ್ಯೆ ಗುಂಪು ಘರ್ಷಣೆಯಾಗಿ ಕಲ್ಲು ತೂರಾಟ ಮಾಡಲಾಗಿದೆ. ಈ ಗಲಾಟೆಯಲ್ಲಿ ಸಂಬಂಧ ಶಹಾಪುರ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದರು.


ಕಾನೂನು ಕೈಗೆತ್ತಿಕೊಳ್ಳದಿರಿ: ಬೆಳಗಾವಿ ನಗರದ ಅಳ್ವಾನ್ ಗಲ್ಲಿಯಲ್ಲಿ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಠಾಣೆಯಲ್ಲಿ ಈಗಾಗಲೇ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕರು ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ.


ಗಲಾಟೆಯಲ್ಲಿ ಜಾತಿ, ಧರ್ಮದ ಬಣ್ಣ ಹಚ್ಚಬೇಡಿ: ಮಕ್ಕಳು ಕ್ರಿಕೆಟ್ ಆಟ ಆಡುವಾಗ ಆರಂಭವಾದ ಜಗಳ ದೊಡ್ಡವರ ಮಟ್ಟಿಗೆ ವಿಕೋಪಕ್ಕೆ ಬೆಳೆದು ಎರಡು ಕೋಮಿನ ಮಧ್ಯೆ ಗುಂಪು ಘರ್ಷಣೆಯಾಗಿದೆ. ಈ ವಿಚಾರವನ್ನು ಜಾತಿ, ಧರ್ಮದ ಬಣ್ಣದಲ್ಲಿ ನೋಡಬಾರದು. ಕೆಲವರು ಜಾತಿ-ಧರ್ಮದ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ಸಂಕಷ್ಟದ ಗಳಿಗೆಯಲ್ಲಿ ಎಲ್ಲರೂ ಒಂದಾಗಿರೋಣ, ಎಚ್ಚರವಾಗಿರೋಣ” ಎಂದು ಸಚಿವ ಸತೀಶ್‌ ಜಾರಕಿಹೊಳಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


ಸಾರ್ವಜನಿಕರಲ್ಲಿ ಸಚಿವರ ಮನವಿ: ಯಾವುದೇ ಪ್ರದೇಶದಲ್ಲಿ ಕಾನೂನುಬಾಹಿರ ಕೃತ್ಯಗಳು ನಡೆದಲ್ಲಿ ಆ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕೆ ವಿನಹ ಯಾರೇ ಆಗಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಬೆಳಗಾವಿಯ ಶಾಂತಿ ಪರಿಸರದಲ್ಲಿ ಅನ್ಯ  ವ್ಯಕ್ತಿಗಳಿಂದ ಕೋಮುಗಲಭೆ ಹುಟ್ಟು ಹಾಕುವ ಪ್ರಯತ್ನ ನಡೆಯುತ್ತಿದೆ. ಅಲ್ಲದೇ ಜಾತಿಗೆ ಬಣ್ಣ ಹಚ್ಚುವ ಕೆಲಸ ನಡೆಯುತ್ತಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡೆದೆ ಕೋಮು ಗಲಭೆ ಸಷ್ಟಿಸುವರ ಮಾತಿಗೆ ಕಿವಿಗೊಡದೇ ಬೆಳಗಾವಿ ನಗರದಲ್ಲಿ ಶಾಂತಿಯನ್ನು ಕಾಪಾಡಬೇಕೆಂದು ಸಾರ್ವಜನಿಕರಲ್ಲಿ ಸಚಿವರು ವಿನಂತಿಸಿದ್ದಾರೆ.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ