LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಅಸಮಾಧಾನ

ಬೆಳಗಾವಿ, ಜೂನ್ 7: ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್  ಅಭ್ಯರ್ಥಿಗೆ ಗೆಲುವಾದರೂ ಪಕ್ಷದ ಒಳಬೇಗುದಿ ಹೆಚ್ಚಾಗಿದೆ. ಇದೀಗ ಶಾಸಕ ಲಕ್ಷ್ಮಣ್  ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ  ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಕೊನೆಯ ವರೆಗೂ ಸಮಸ್ಯೆಯಾಯಿತು ಎಂದಿದ್ದಾರೆ.

ಅಥಣಿಯಲ್ಲಿ ಮಾತನಾಡಿದ ಅವರು, ಈಗ ಕಾಂಗ್ರೆಸ್​ಗೆ ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮುಖಂಡರು ಬದಲಾದರೂ ಕಾರ್ಯಕರ್ತರು ಬದಲಾಗಲಿಲ್ಲ. ಅಥಣಿಯಲ್ಲಿ 20-30 ಸಾವಿರ ಲೀಡ್ ಸಿಗುತ್ತೆ ಅಂದುಕೊಂಡಿದ್ದೆವು. ಆದರೆ ಏನೋ ಮಾಡಲು ಹೋಗಿ ಇನ್ನೇನೋ ಆಯಿತು ಎಂದು ಹೇಳಿದ್ದಾರೆ.

ಅವರು ಏಕೆ ಹಾಗೆ ಮಾಡಿದರು, ಅವರ ಪ್ಲ್ಯಾನ್ ಏನಿತ್ತು ನೋಡೋಣ. ಅವರು ಸೀರಿಯಲ್​ನಲ್ಲಿ ಬರುವಂತೆ ನಿಧಾನ ಆಗುತ್ತಾ ಹೋದರು. ಸರಿಯಾಗಿ ಪ್ರಚಾರ ಮಾಡಲಿಲ್ಲ, ಇದನ್ನು ನಾವು ನೋಡಿದ್ದೇವೆ. ವಿಶ್ವಾಸ ಇಟ್ಟು ಕೊಟ್ಟಿದ್ದೆವು, ಬಹಳ ನಂಬಿದ್ದೆವು. ಆದರೆ ಬಹಳ ಮೋಸ ಮಾಡಿದ್ದಾರೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮಗೆ ಹತ್ತಿರ ಬರಲು ಅವರಿಗೆ ಒಳ್ಳೆಯ ಅವಕಾಶ ಇತ್ತು. ಆದರೆ, ಬಿಜೆಪಿಯಿಂದ ಪಕ್ಷಕ್ಕೆ ಬಂದವರು ಕೊನೆಯವರೆಗೆ ಸಮಸ್ಯೆ ಮಾಡಿದರು ಎಂದು ಲಕ್ಷ್ಮಣ್ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ