LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ದಿನಾಂಕ ಘೋಷಣೆ

ಚನ್ನಮ್ಮನ ಕಿತ್ತೂರು: ಬೆಳಗಾವಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಈ ಕುರಿತು ತಹಶೀಲ್ದಾರರಾದ ಕಲಗೌಡ ಆರ್. ಪಾಟೀಲ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಫೆಬ್ರವರಿ 7 ರಂದು ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತ ಸಭಾ ಭವನದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಎಲ್ಲಾ ಚುನಾಯಿತ ಸದಸ್ಯರಿಗೆ ಮತ್ತು ಜನಪ್ರತಿನಿಧಿಗಳಿಗೆ ನೋಟಿಸ್ ಮೂಲಕ ಮಾಹಿತಿ ನೀಡಲಾಗಿದೆ.

ಈ ಬಾರಿಯ ಮೀಸಲಾತಿಯನ್ವಯ ಅಧ್ಯಕ್ಷ ಸ್ಥಾನವು "ಸಾಮಾನ್ಯ" ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನವು "ಹಿಂದುಳಿದ ಅ" ವರ್ಗಕ್ಕೆ ಮೀಸಲಾಗಿರಿಸಲಾಗಿದೆ. ಕಿತ್ತೂರು ತಹಶೀಲ್ದಾರರು ಈ ಚುನಾವಣೆಯ ಗೊತ್ತುಪಡಿಸಿದ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಇಲಾಖೆಯ ಮೂಲಗಳು ತಿಳಿಸಿವೆ.

ಪಟ್ಟಣದ ಅಭಿವೃದ್ಧಿಯ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ರಾಜಕೀಯ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್