LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೊಳಗಲ್ಲು: ಸರ್ಕಾರಿ ಶಾಲೆ ದತ್ತು ಪಡೆದ ಶಾಸಕ ಬಿ.ನಾಗೇಂದ್ರ - ಮಾದರಿ ಶಾಲೆಯಾಗಿ ಅಭಿವೃದ್ಧಿಪಡಿಸಲು ಪಣ

ಬಳ್ಳಾರಿ,ಏ.04- ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಬಳ್ಳಾರಿ ತಾಲ್ಲೂಕಿನ ಕೊಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾ.02 ರಂದು ದತ್ತು ಪಡೆದಿದ್ದಾರೆ.
ಕ್ಷೇತ್ರದ ಈ ಶಾಲೆಯನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸಿ, ಬಳ್ಳಾರಿ ಗ್ರಾಮಾಂತರ ಭಾಗದಲ್ಲೇ ಒಂದು ಮಾದರಿ ಶಾಲೆಯನ್ನಾಗಿ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಶಾಲೆಯ ಸಮಗ್ರ ವಿಕಾಸಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶಾಲೆಯಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದು ಈ ದತ್ತು ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಶಾಸಕರ ಈ ನಡೆಯನ್ನು ಶಾಲೆಯ ಪ್ರಭಾರಿ ಮುಖ್ಯ ಗುರುಗಳು ಹಾಗೂ ಶಿಕ್ಷಕ ವೃಂದದವರು ಮುಕ್ತ ಕಂಠದಿAದ ಶ್ಲಾಘಿಸಿದ್ದಾರೆ. ಈ ಅಭಿವೃದ್ಧಿ ಕಾರ್ಯದಿಂದಾಗಿ ನಮ್ಮ ಶಾಲೆ ಉತ್ತಮ ಶಾಲೆಯಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಾಸಕರ ಕಾಳಜಿಯು ಇಡೀ ಸಮಾಜದ ಗಮನ ಸೆಳೆಯುವಂತಿದೆ. ಬಳ್ಳಾರಿ ಗ್ರಾಮಾಂತರ ಭಾಗದಲ್ಲಿ ಶಾಸಕರೊಬ್ಬರು ಈ ರೀತಿ ಶಾಲೆಯನ್ನು ದತ್ತು ಪಡೆಯುತ್ತಿರುವುದು ಇದೇ ಮೊದಲು ಎಂದು ಶಾಲಾ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ