LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

೭೨ ಜನ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಿದ ಶಾಸಕ ಜೆ.ಟಿ.ಪಾಟೀಲ

ಬಾಗಲಕೋಟೆ : ಸೆಪ್ಟೆಂಬರ ೨೧  : ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಆಯ್ಕೆಯಾದ ಒಟ್ಟು ೭೨ ಜನ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ರವಿವಾರ ವಿತರಣೆ ಮಾಡಿದರು.
ಬಾಗಲಕೋಟೆ ನಗರದ ಹಳೆಯ ಪ್ರವಾಸಿ ಮಂದಿರದಲ್ಲಿ ಗ್ರಾಮೀಣ ಕೈಗಾರಿಕಾ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲವಾಗುವಂತೆ ಸರ್ಕಾರದಿಂದ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಅವರ ವೃತ್ತಿಗೆ ಅಗತ್ಯವಿರುವ ಉಪಕರಣಗಳನ್ನು ಪ್ರತಿ ವರ್ಷ ಬೇಡಿಕೆಯ ಆಧಾರದ ಮೇಲೆ ಖರೀದಿಸಿ ಉಚಿತವಾಗಿ ವಿತರಿಸಲಾಗುತ್ತಿದೆ. ಇದರಿಂದ ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಸ್ವಾವಲಂಬನೆಯೊಂದಿಗೆ ಮುಂದುವರಿಸಲು ಸಹಕಾರಿಯಾಗಲಿದೆ ಎಂದರು. ಉಚಿತ ಹೊಲಿಗೆ ಯಂತ್ರ ವಿತರಣೆಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿ ಬೀಳಗಿ ಮತಕ್ಷೇತ್ರ ವ್ಯಾಪ್ತಿಯಿಂದ ಒಟ್ಟು ೧೫೭ ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ಪೈಕಿ ಅರ್ಹತೆ ಹೊಂದಿರುವ ೭೨ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಸ್ವಂತ ನಿವೇಶನ ಹೊಂದಿರದ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸುವ ಭೂ ಯೋಜನೆಯನ್ನೂ ಅನುಷ್ಠಾನಗೊಳಿಸಲಾಗುತ್ತಿದೆ. ಬೀಳಗಿ ಮತಕ್ಷೇತ್ರದಲ್ಲಿ ಅಂದಾಜು ೫ ಸಾವಿರ ನಿವೇಶನಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು. ಮಹಿಳೆಯರು ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರ ಎಸ್.ಎಂ.ಬಳೂರಗಿ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST