LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಅಭಿನಂದಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬೆಂಗಳೂರು/ಬಳ್ಳಾರಿ, ಜೂ.08 
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡ ಬಿ.ಕೆ. ಹರಿಪ್ರಸಾದ್ ಅವರನ್ನು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಕೆಪಿಸಿಸಿ ಕಚೇರಿಯಲ್ಲಿ ಭೇಟಿಯಾಗಿ  ಅಭಿನಂದಿಸಿ, ಶುಭಕೋರಿದರು 
ಈ ಸಂದರ್ಭ ಬಳ್ಳಾರಿ ಜಿಲ್ಲೆಯ ಭವಿಷ್ಯದ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ  ಹೊಸದಾಗಿ ನೇಮಕಗೊಂಡ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು ಮತ್ತು ಅವರ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷವು ಇನ್ನಷ್ಟು ಬಲಪಡುತ್ತದೆ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ವಿಶೇಷವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಅಭಿವೃದ್ಧಿ ಮತ್ತು ಜನಸೇವೆಯ ಹೊಸ ಅಧ್ಯಾಯ ಆರಂಭವಾಗುತ್ತದೆ ಎಂಬ ವಿಶ್ವಾಸವನ್ನು ಶಾಸಕ ನಾರಾ ಭರತ್ ರೆಡ್ಡಿ ವ್ಯಕ್ತಪಡಿಸಿದ್ದಾರೆ.
ಭೇಟಿ ವೇಳೆ ಬಳ್ಳಾರಿ ಜಿಲ್ಲೆಯ ರಾಜಕೀಯ ಪರಿಸ್ಥಿತಿ, ಪಕ್ಷದ ಸಂಘಟನಾತ್ಮಕ ಬಲವರ್ಧನೆ, ಅಭಿವೃದ್ಧಿ ಯೋಜನೆಗಳು ಮತ್ತು ಭವಿಷ್ಯದ ಕಾರ್ಯಯೋಜನೆಗಳ ಬಗ್ಗೆ ವಿವರವಾದ ಚರ್ಚೆ ನಡೆಯಿತು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಸಬಲಗೊಳಿಸುವುದು ಮತ್ತು ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವುದು ಈ ಚರ್ಚೆಯ ಮುಖ್ಯ ಅಂಶಗಳಾಗಿದ್ದವು ಎಂದು ಶಾಸಕರು ತಿಳಿಸಿದ್ದಾರೆ.
ಬಿ.ಕೆ. ಹರಿಪ್ರಸಾದ್ ಅವರ ಅನುಭವ ಮತ್ತು ನಾಯಕತ್ವವು ಪಕ್ಷಕ್ಕೆ ಮಾರ್ಗದರ್ಶನವಾಗುತ್ತದೆ ಎಂದು ನನ್ನ ಭಾವನೆ, ಅವರ ಯಶಸ್ವಿ ನಾಯಕತ್ವಕ್ಕೆ ಶುಭಕಾಮನೆ ಸಲ್ಲಿಸಿದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್