LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇನೆ: ಶಾಸಕ ಯತ್ನಾಳ

ವಿಜಯಪುರ (ಜೂ.23): ನನ್ನ ಮನವೊಲಿಕೆ ಪ್ರಯತ್ನಗಳು ನಡೆಯುತ್ತಲೇ ಇದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡೋದಾಗಿ ಈಚೆಗೆ ನಗರಕ್ಕೆ ಬಂದ ನಾಯಕರು ಭರವಸೆ ನೀಡಿದ್ದರು. ಆದರೆ, ನಾನು ವಿಜಯೇಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ, ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಜೊತೆ ಹೊಂದಾಣಿಕೆ ಆಗುವಂತೆ ಯತ್ನಾಳ ಮನವೊಲಿಕೆಗೆ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ನಾನು ಅವರಿಗೆ ಕಾಂಪಿಟೇಟರ್ ಇದ್ದೇನೆ ಎಂದು ತಿಳಿಸಿದರು.

ಕಾಯ್ದೆ ಬದಲಾಗಲಿ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಶಿವಕುಮಾರ ಅಥವಾ ಡಿ.ಕೆ.ಸುರೇಶ ಸ್ಪರ್ಧೆ ಮಾಡುವ ಚರ್ಚೆ ನಡೆದಿರುವ ಕುರಿತು ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು. ಆದರೆ ಚುನಾವಣೆ ಸ್ಪರ್ಧೆಯ ವಿಚಾರದಲ್ಲಿ ಚುನಾವಣಾ ಆಯೋಗ ಕೆಲ ಕಾಯ್ದೆಗಳನ್ನು ಮಾರ್ಪಾಡು ಮಾಡಬೇಕು. ಒಂದು ಕ್ಷೇತ್ರದಲ್ಲಿ ಸಂಸದ, ಶಾಸಕರು ಆಗಿರುವವರು ಮತ್ತೊಂದು ಕ್ಷೇತ್ರಕ್ಕೆ ಸ್ಪರ್ಧೆ ಮಾಡಲು ಅವಕಾಶ ನೀಡಬಾರದು. ಈ ಕುರಿತು ಹೊಸ ಕಾನೂನು ಜಾರಿ ಮಾಡಬೇಕೆಂದು ಯತ್ನಾಳ ಒತ್ತಾಯಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ