ಬೆಂಗಳೂರು, ಜೂನ್ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ನಿಮ್ಹಾನ್ಸ್ನ 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅನುಮೋದನೆ ನೀಡಿರುವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಇದು ಬೆಂಗಳೂರು ನಗರದಾದ್ಯಂತ ಅಪಘಾತಕ್ಕೀಡಾದವರಿಗೆ ತುರ್ತು ಆರೈಕೆ ಮತ್ತು ಜೀವ ಉಳಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಕ್ಯಾಲಸನಹಳ್ಳಿಯಲ್ಲಿ 498 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಮತ್ತು 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ ಕೇಂದ್ರದ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದಿಂದ ಶುಕ್ರವಾರ ಅನುಮೋದನೆ ನೀಡಿದೆ. ಇತ್ತೀಚೆಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ, ಈ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಒತ್ತಾಯಿಸಿದ್ದರು. ಅದರಂತೆ ಅಂತಿಮವಾಗಿ ಕೆಂಪೇಗೌಡ ಜಯಂತಿ ಸಮಯದಲ್ಲಿ ಮಂಜೂರು ಮಾಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.