LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜಬಲ್‌ಪುರದಲ್ಲಿ ಮೋದಿ ಬೃಹತ್ ರೋಡ್‌ಶೋ: ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ

ಜಬಲ್‌ಪುರ,ಏಪ್ರಿಲ್​ 08:: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಬಲ್‌ಪುರದಲ್ಲಿ ಬೃಹತ್ ರೋಡ್‌ಶೋ ನಡೆಸುವ ಮೂಲಕ ಮಧ್ಯಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ PWD ಸಚಿವ ರಾಕೇಶ್ ಸಿಂಗ್ ಮತ್ತು ಪಕ್ಷದ ಜಬಲ್ಪುರ ಲೋಕಸಭಾ ಅಭ್ಯರ್ಥಿ ಆಶಿಶ್ ದುಬೆ ಅವರು ಪ್ರಧಾನಿ ಮೋದಿ ಜತೆಗೆ ಇದ್ದರು.

ರೋಡ್‌ಶೋ ಶಹೀದ್ ಭಗತ್ ಸಿಂಗ್ ಕ್ರಾಸಿಂಗ್‌ನಿಂದ ಸಂಜೆ 6:30 ರ ಸುಮಾರಿಗೆ ಪ್ರಾರಂಭವಾಯಿತು ಮತ್ತು ರಾತ್ರಿ 7:15 ಕ್ಕೆ ಇಲ್ಲಿನ ಗೋರಖ್‌ಪುರ ಪ್ರದೇಶದ ಆದಿ ಶಂಕರಾಚಾರ್ಯ ಕ್ರಾಸಿಂಗ್‌ನಲ್ಲಿ ಮುಕ್ತಾಯವಾಯಿತು.

ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಮಧ್ಯ ಪ್ರದೇಶಕ್ಕೆ ಮೊದಲ ಬಾರಿ ಪ್ರಧಾನಿ ಮೋದಿ ಭೇಟಿ ನೀಡಿದ್ದು, ಸಿಎಂ ಮೋಹನ್ ಯಾದವ್ ಮತ್ತು ಇತರ ಬಿಜೆಪಿ ನಾಯಕರು ಪ್ರಧಾನಿ ಮೋದಿಗೆ ಸಾಥ್ ನೀಡಿದರು.

ಬಿಸಿಲಿನ ತಾಪದ ನಡುವೆಯೂ ಮಧ್ಯಾಹ್ನ 3 ಗಂಟೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನ ಮಾರ್ಗದ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದರು ಮತ್ತು ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಾ ಮತ್ತು ವೀಡಿಯೊಗಳನ್ನು ಶೂಟ್ ಮಾಡುತ್ತಿದ್ದರು.

ಅವರಲ್ಲಿ ಹಲವರು 'ಮೇರಾ ಘರ್ ಮೋದಿ ಕಾ ಘರ್' ಮತ್ತು 'ಮೇರಾ ಪರಿವಾರ್ ಮೋದಿ ಕಾ ಪರಿವಾರ್' ಎಂಬ ಫಲಕಗಳನ್ನು ಹಿಡಿದಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್