LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಾತ್ರೆಗಳಿಂದ  ಪ್ರೀತಿ, ವಿಶ್ವಾಸ ಹೆಚ್ಚಳ : ಸಂಸದ ಕಾಗೇರಿ 

 
ನೇಸರಗಿ. ನಗರ ಪಟ್ಟಣ, ಗ್ರಾಮಗಳಲ್ಲಿ ನಡೆಯುವ ಜಾತ್ರೆಗಳಿಂದ ಅದರಲ್ಲಿ ಗ್ರಾಮದೇವತೆಯ ಜಾತ್ರೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಜಾತ್ರೆಗಳಿಂದ ಜನರಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಾಗುತ್ತದೆ ಎಂದು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ  ಕಾಗೇರಿ ಹೇಳಿದರು.

     ಅವರು ಶನಿವಾರದಂದು ಸಮೀಪದ ಮದನಬಾವಿ ಗ್ರಾಮದಲ್ಲಿ 11 ವರ್ಷಗಳ ನಂತರ ನಡೆಯುತ್ತಿರುವ ಶ್ರೀ ಗ್ರಾಮದೇವತೆಯ ಅದ್ದೂರಿ ಜಾತ್ರೆಗೆ ಬೇಟಿ ನೀಡಿ, ದೇವಿಯ ದರ್ಶನ ಪಡೆದು  ಮಾತನಾಡಿ ಶ್ರೀ ಗ್ರಾಮದೇವತೆಯೂ ಗ್ರಾಮದ ಎಲ್ಲರಿಗೂ ಸುಖ ಸಂತೋಷ, ಮಳೆ, ಬೆಳೆ, ನೀಡಿ ಜನ ಸದಾ ಸುಖದಿಂದ ಜೀವನ ಮಾಡಲಿ ಎಂದರು.

    ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ  ಮಹಾಂತೇಶ ದೊಡ್ಡಗೌಡರ ಮಾತನಾಡಿ 11 ವರ್ಷಗಳ ನಂತರ ಗ್ರಾಮದೇವತೆ ಜಾತ್ರೆ ನಡೆಯುತ್ತಿರುವದು ನಮಗೆಲ್ಲರಿಗೂ ಸಂತಸ ತಂದಿದ್ದು, ದೂರದ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲರೂ ಇಂದು ಗ್ರಾಮಕ್ಕೆ ಬಂದು ತನು ಮನ ಧನದಿಂದ ಜಾತ್ರೆ ಅಚರಿಸುತ್ತಿದ್ದು ಸಂತಸದ ವಿಷಯ ಎಂದರು.

    ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಶಿವಪ್ಪ ಗುಜನಾಳ, ಯಲ್ಲನಗೌಡ ದೊಡ್ಡಗೌಡರ, ಅಜ್ಜಪ್ಪ ಹಮ್ಮಿನಿ, ನಿಂಗನಗೌಡ ದೊಡ್ಡಗೌಡರ, ಈರನಗೌಡ ದೊಡ್ಡಗೌಡರ, ಚನಗೌಡ ಹಾದಿಮನಿ, ಬಸವರಾಜ ಬದ್ರಿ, ಸೋಮಪ್ಪ ಕೊಳದೂರ, ಶಂಕರಗೌಡ ಕೊಳದೂರ , ಜಾತ್ರಾ ಕಮಿತಿ ಸದಸ್ಯರು, ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್