LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ

ಬೆಂಗಳೂರು,ಏಪ್ರಿಲ್ 17:  ಕೊಪ್ಪಳ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು.


ಕೊಪ್ಪಳ ಬಿಜೆಪಿ ಟಿಕೆಟ್ ವಂಚಿತ ಹಾಲಿ ಸಂಸದ ಕರಡಿ ಸಂಗಣ್ಣ ನಿನ್ನೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್ ಮತ್ತಿತರರು ಕೂಡ ಕಾಂಗ್ರೆಸ್ ಸೇರಿದರು. ಈ ವೇಳೆ ಸಚಿವ ಶಿವರಾಜ್ ತಂಗಡಗಿ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಉಪಸ್ಥಿತರಿದ್ದರು.


ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಕರಡಿ ಸಂಗಣ್ಣ, ''ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಲು ಮೂಲ ಕಾರಣ ಲಕ್ಷ್ಮಣ ಸವದಿ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಸೇರ್ಪಡೆ ಆಗಿದ್ದೇನೆ. ರಾಜಶೇಖರ್ ಹಿಟ್ನಾಳ್​ ಅವರನ್ನು ಗೆಲ್ಲಿಸುತ್ತೇವೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್. ನಿಜವಾಗಿಯೂ ಇದು ಸಂಭ್ರಮದ ದಿನ'' ಎಂದರು.


''14 ವರ್ಷಗಳ ಹಿಂದೆ ಲಕ್ಷ್ಮಣ್ ಸವದಿಯವರು ಹೋರಾಟ ಮಾಡುತ್ತಿದ್ದಾಗ ನಿನಗೆ ಅಭಿವೃದ್ಧಿ ಬೇಕಾ ಹೋರಾಟ ಬೇಕಾ ಅಂದ್ರು. ಆಗ ನಾನು ಬಿಜೆಪಿ ಪಕ್ಷ ಸೇರ್ಪಡೆಯಾದೆ. ಇದು ಕಾಕತಾಳೀಯ, ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ಕೊಪ್ಪಳದಲ್ಲಿ ನಮ್ಮ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಗೆಲ್ಲಿಸಿಕೊಂಡು ಬರಬೇಕು ಎಂದು ನಾವೆಲ್ಲರೂ ಚಾಲೆಂಜ್ ತೆಗೆದುಕೊಂಡಿದ್ದೇವೆ. ವ್ಯಕ್ತಿಗತ ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ. ಎರಡು ಜಿಲ್ಲೆಯ ಅಭಿವೃದ್ಧಿಗೆ ಸಿಎಂ, ಡಿಸಿಎಂ ಬೆಂಬಲ ನೀಡುತ್ತಾರೆ ಅಂತ ನಂಬಿದ್ದೇನೆ. ತಾಗ್ಯ,ಬಲಿದಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಹೀಗಾಗಿ, ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ'' ಎಂದು ತಿಳಿಸಿದರು.


ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ''ಬಿಜೆಪಿಯಲ್ಲಿ ಎರಡು ಬಣವಿದೆ. ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ಎಲ್‌. ಸಂತೋಷ್ ಬಣ. ಆದರೆ ಬಿ.ಎಸ್. ಯಡಿಯೂರಪ್ಪ ಅವರು ಒಪ್ಪದವರಿಗೆ ಲೋಕಸಭೆ ಟಿಕೆಟ್ ತಪ್ಪಿಸಲಾಗಿದೆ'' ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ