LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಎಸ್‌ಐಟಿ ಕಚೇರಿಯಲ್ಲಿ ಪ್ರಜ್ವಲ್ ರಾತ್ರಿ ಕಳೆದ ಸಂಸದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಸುಕಿನ 1.10 ರ ಸುಮಾರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿಯಿಂದ ಬಂಧನಕ್ಕೊಳಗಾದ 33 ವರ್ಷದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಮಹಿಳಾ ತಂಡವು ಪೊಲೀಸ್ ಜೀಪ್‌ನಲ್ಲಿ ಮಧ್ಯರಾತ್ರಿ 2.02ರ ಸುಮಾರಿಗೆ ಎಸ್‌ಐಟಿ ಕಚೇರಿಗೆ ಕರೆತಂದಿತು. ಇದೀಗ ಎಸ್‌ಐಟಿ ಕಚೇರಿಯಲ್ಲಿ ಪ್ರಜ್ವಲ್ ರಾತ್ರಿ ಕಳೆದಿದ್ದಾರೆ.




ಪ್ರಜ್ವಲ್ ಅವರನ್ನು ಶುಕ್ರವಾರ ಬೆಳಗ್ಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.








ಶುಕ್ರವಾರ ಬೆಳಗ್ಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಅತ್ಯಾಚಾರ ಘಟನೆಗಳು ನಡೆದಿವೆ ಎಂದು ಹೇಳಲಾದ ಪ್ರಜ್ವಲ್ ರೇವಣ್ಣ ಅವರ ವಸತಿ ಗೃಹ ಮತ್ತು ಹೊಳೆನರಸೀಪುರದ ಫಾರ್ಮ್‌ ಹೌಸ್‌ಗಳಿಗೆ ಸ್ಥಳ ಮಹಜರಿಗಾಗಿ ಅವರನ್ನು ಕರೆದೊಯ್ಯಬೇಕಾಗಿರುವುದರಿಂದ ಎಸ್‌ಐಟಿ ಅವರನ್ನು ಕಸ್ಟಡಿಗೆ ಕೇಳಲಿದೆ. ಬಳಿಕ ಎಸ್‌ಐಟಿ ಅಧಿಕಾರಿಗಳು ವಿವರವಾದ ಹೇಳಿಕೆಗಳನ್ನು ದಾಖಲಿಸಿಕೊಳ್ಳಬೇಕಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ